ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದ್ದು, ಅಭ್ಯರ್ಥಿಗಳು ಭರ್ಜರಿ ಮತ ಬೇಟೆ ಆರಂಭಿಸಿದ್ದಾರೆ. ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಬಿವೈ ವಿಜಯೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಧರ್ಮ , ಭಾಷೆ ಜಾತಿ , ಸೌಹಾರ್ದ್ಯತೆ ವಿಚಾರದಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ ಎಂದು ಆರೋಪಿಸಿ ದೂರು ದಾಖಲಾದ ಹಿನ್ನೆಲೆ ಬಿ ವೈ ವಿಜಯೇಂದ್ರ ಹಾಗೂ ಬಿಜೆಪಿ for Karnataka ಖಾತೆ ಮೇಲೆ ಎಫ್ಐಆರ್ ದಾಖಲಾಗಿದೆ.
ಶಿಕಾರಿಪುರ ವಿಧಾನಸಭಾಕ್ಷೇತ್ರದ ಶಾಸಕರು ಆಗಿರುವ ವಿಜಯೇಂದ್ರ ಹಾಗೂ ಬಿಜೆಪಿ ಎಕ್ಸ್ ಖಾತೆ ಉಸ್ತುವಾರಿ ವಹಿಸಿಕೊಂಡಿರುವವರ ವಿರುದ್ಧ ಗಾಂಧಿನಗರದ ಚುನಾವಣಾ ನೊಡೆಲ್ ಅಧಿಕಾರಿ ಅರ್ಜುನ್ ಆಯೂರ್ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.