ಮನೆ ಸುದ್ದಿ ಜಾಲ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಬೆಂಕಿ ಅವಘಡ; ರಜೆ ಹಿನ್ನೆಲೆ ತಪ್ಪಿದ ಭಾರಿ ಅನಾಹುತ

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಬೆಂಕಿ ಅವಘಡ; ರಜೆ ಹಿನ್ನೆಲೆ ತಪ್ಪಿದ ಭಾರಿ ಅನಾಹುತ

0

ಬೆಂಗಳೂರು, ಮೇ 30: ನಗರದ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿರುವ ಖಾಸಗಿ ಕೌಶಲ್ಯ ಶಾಲೆಯಲ್ಲಿ ಶುಕ್ರವಾರ (ಮೇ 30) ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ.

ಶಾಲೆಯ ಆಡಿಟೋರಿಯಂನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಬೆಂಕಿ ಕಾಣಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

ಇಂದು ಶಾಲೆಗೆ ರಜೆ ಇದ್ದ ಕಾರಣ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಶಾಲೆಯಲ್ಲಿರಲಿಲ್ಲ. ಇದರಿಂದ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಪ್ರಕರಣಗಳು ವರದಿಯಾಗಿಲ್ಲ. ಸಮಯೋಚಿತವಾಗಿ ಬೆಂಕಿ ನಿಯಂತ್ರಣಕ್ಕೆ ಬಂದಿದ್ದರಿಂದ ಸಂಭವಿಸಬಹುದಾದ ದೊಡ್ಡ ದುರಂತ ತಪ್ಪಿದೆ.ಘಟನೆ ಕುರಿತು ಮಾಹಿತಿ ಪಡೆದ ಜ್ಞಾನಭಾರತಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.