ಮೈಸೂರು : ನಗರದ ದೇವೇಗೌಡ ಸರ್ಕಲ್ನಲ್ಲಿರುವ ಕಾವೇರಿ ನರ್ಸಿಂಗ್ ಕಾಲೇಜಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಧಗಧಗ ಕಟ್ಟಡ ಹೊತ್ತಿ ಉರಿದಿದೆ.
ಕಾಲೇಜು ಕಟ್ಟಡದ ಮೇಲ್ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡ ಧಗಧಗನೆ ಹೊತ್ತಿ ಉರಿದಿದೆ. ಶಾರ್ಟ್ ಸಕ್ರ್ಯೂಟ್ನಿಂದ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.
ಈ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿಯನ್ನು ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ ಎಂದು ತಿಳಿದು ಬಂದಿದೆ.















