ಮನೆ ರಾಷ್ಟ್ರೀಯ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಬೆಂಕಿ ಅವಘಡ : ಕಾರುಗಳು ಸುಟ್ಟು ಭಸ್ಮ

ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಬೆಂಕಿ ಅವಘಡ : ಕಾರುಗಳು ಸುಟ್ಟು ಭಸ್ಮ

0

ನವದೆಹಲಿ: ಇಲ್ಲಿನ ಝಂಡೇವಾಲನ್ ಪ್ರದೇಶದ ಅನಾರ್ಕಲಿ ಕಟ್ಟಡ ಹಾಗೂ ಡಿಡಿಎ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಮಂಗಳವಾರ ಮಧ್ಯಾಹ್ನ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಘಟನಾ ಸ್ಥಳಕ್ಕೆ 15 ಅಗ್ನಿಶಾಮಕ ದಳ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬ್ಲಾಕ್ ಇ 3ರಲ್ಲಿರುವ ಅನಾರ್ಕಲಿ ಕಾಂಪ್ಲೆಕ್ಸ್‌ನಲ್ಲಿ ಮಧ್ಯಾಹ್ನ 2:35ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸ್ಥಳದಲ್ಲಿ ನಿಲ್ಲಿಸಿದ್ದ ಹಲವಾರು ಕಾರುಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಬೆಂಕಿ ಹತ್ತಿರದ ಬ್ಯಾಂಕ್‌ಗೂ ಹರಡಿದೆ. ಸದ್ಯ ಬೆಂಕಿ ಅವಘಡದಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.