ಮನೆ ಅಪರಾಧ ಬೆಂಗಳೂರಿನಲ್ಲಿ ಅಗ್ನಿ ಅವಘಡ : 2 ಕ್ರೇನ್ ವಾಹನಗಳಿಗೆ ಬೆಂಕಿ

ಬೆಂಗಳೂರಿನಲ್ಲಿ ಅಗ್ನಿ ಅವಘಡ : 2 ಕ್ರೇನ್ ವಾಹನಗಳಿಗೆ ಬೆಂಕಿ

0

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ರಸ್ತೆಯಲ್ಲಿ ನಿಲ್ಲಿಸಿದ್ದ ಎರಡು ಕ್ರೇನ್ ವಾಹನಗಳು ಹೊತ್ತಿ ಉರಿದಿವೆ.

ಬೆಂಗಳೂರಿನ ಕಂಟೋನ್ಮೆಂಟ್ ರಸ್ತೆಯಲ್ಲಿ ನಿಲ್ಲಿಸಿದ್ದ ಎರಡು ಕ್ರೇನ್ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಬಗ್ಗೆ ಮಾಹಿತಿ ಪಡೆದ ತಕ್ಷಣ ಅಗ್ನಿ ಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.