ಮನೆ ಅಂತಾರಾಷ್ಟ್ರೀಯ ಮೂರಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: 12 ಮಂದಿಯ ರಕ್ಷಣೆ

ಮೂರಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: 12 ಮಂದಿಯ ರಕ್ಷಣೆ

0

ನವದೆಹಲಿ (New Delhi): ದೆಹಲಿಯ ‘ನ್ಯೂ ಅಶೋಕ ನಗರ’ದ ಮೂರು ಮಹಡಿಯ ಕಟ್ಟಡವೊಂದರಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, 12  ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಕರೆ ಬಂದ ಕೂಡಲೇ ಅಗ್ನಿಶಾಮಕ ದಳದ ಐದು ವಾಹನಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದರು. ಈವರೆಗೆ 12 ಮಂದಿಯನ್ನು ರಕ್ಷಿಸಲಾಗಿದೆ. ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ.

ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂಬುದನ್ನು ಪತ್ತೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಈವರೆಗೆ ಸಾವು–ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಬೆಂಕಿಯನ್ನು ನಿಯಂತ್ರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಹಿಂದಿನ ಲೇಖನಕೆ.ಆರ್.ಪೇಟೆ: 1500 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಮುಂದಿನ ಲೇಖನ92 ಪೊಲೀಸ್‌ ಇನ್‌ ಸ್ಪೆಕ್ಟರ್‌ ಗಳ ವರ್ಗಾವಣೆ: ಸರ್ಕಾರದಿಂದ ಆದೇಶ