ಬೆಂಗಳೂರು: ರಾಮಮೂರ್ತಿ ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಗ್ಯಾರೇಜ್’ವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಕಾರುಗಳು ಬೆಂಕಿಗಾಹುತಿಯಾಗಿವೆ.
10ಕ್ಕೂ ಅಧಿಕ ಕಾರುಗಳು ಸುಟ್ಟು ಕರಕಲಾಗಿವೆ.
ಚಾಂದ್ ಪಾಷ, ತಬೇರೇಸ್ ಪಾಷ ಎಂಬವರಿಗೆ ಸೇರಿದ ಜಿಟಿ ಗ್ಯಾರೇಜ್ ಟೆಕ್’ನಲ್ಲಿ ಬುಧವಾರ ಸಂಜೆ 7 ಗಂಟೆ ಸುಮಾರಿಗೆ ಗ್ಯಾರೇಜ್ನ ಸ್ಪಾಟರ್’ನಲ್ಲಿ ಕೆಲಸ ಮಾಡುವಾಗ ಬೆಂಕಿ ಕಿಡಿ ಹಾರಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದೆ.
ಮಾಹಿತಿ ಆಧರಿಸಿ ಸ್ಥಳಕ್ಕೆ ಐದಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.