ಮನೆ ರಾಷ್ಟ್ರೀಯ ಮಹಾರಾಷ್ಟ್ರದಲ್ಲಿ ಅಗ್ನಿ ಅವಘಡ: ದಂಪತಿ ಸಾವು, ಮೂವರ ಸ್ಥಿತಿ ಗಂಭೀರ

ಮಹಾರಾಷ್ಟ್ರದಲ್ಲಿ ಅಗ್ನಿ ಅವಘಡ: ದಂಪತಿ ಸಾವು, ಮೂವರ ಸ್ಥಿತಿ ಗಂಭೀರ

0

ಮುಂಬೈ: ಮಹಾರಾಷ್ಟ್ರದ ಥಾಣೆಯ ಘೋಡ್‌ ಬಂದರ್ ರಸ್ತೆಯಲ್ಲಿರುವ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ  ದಂಪತಿ ಮೃತಪಟ್ಟಿದ್ದು, ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು (ಶನಿವಾರ) ಮುಂಜಾನೆ 3.20ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಅಭಿಮನ್ಯು ಮಾದ್ವಿ (60) ಮತ್ತು ಅವರ ಪತ್ನಿ ರಮಾಬಾಯಿ (55) ದಂಪತಿ ದಟ್ಟ ಹೊಗೆಯಿಂದಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.

ಅದೇ ಕುಟುಂಬದ ಮೂವರನ್ನು ರಕ್ಷಿಸಲಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಆರ್‌ ಡಿಎಂಸಿ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಎರಡು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ನಡೆದಾಗ ದಂಪತಿ ಮತ್ತು ಕುಟುಂಬದ ಇತರ ಸದಸ್ಯರು ಮೊದಲ ಮಹಡಿಯಲ್ಲಿ ಮಲಗಿದ್ದರು ಎಂದು ತಿಳಿದು ಬಂದಿದೆ.

ಕೋಣೆಯಲ್ಲಿ ದಂಪತಿಯ ಮೃತದೇಹಗಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿವೆ. ಉಳಿದಂತೆ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂದು ಆರ್‌ಡಿಎಂಸಿ ಅಧಿಕಾರಿ ಯಾಸಿನ್ ತಿಳಿಸಿದ್ದಾರೆ.

ಹಿಂದಿನ ಲೇಖನಅಮಿತ್ ಶಾ ಬಂದು ಮನೆಯಲ್ಲಿ ಕೂತು ಜೀವ ತೆಗೆದ್ರು: ಸಿದ್ದಗಂಗಾ ಶ್ರೀಗಳ ಮುಂದೆ ನೋವು ತೋಡಿಕೊಂಡ ವಿ.ಸೋಮಣ್ಣ
ಮುಂದಿನ ಲೇಖನತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ ನರೇಂದ್ರ ಮೋದಿ