ಮುಂಬೈ: ಶುಕ್ರವಾರ ನಸುಕಿನ ಜಾವ ಮುಂಬೈನ ಗೋರೆಗಾಂವ್ ಪ್ರದೇಶದಲ್ಲಿ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಅಪ್ರಾಪ್ತರು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
30 ನಿವಾಸಿಗಳನ್ನು ಟೆರೇಸ್ ಮತ್ತು ನೆಲಮಹಡಿ ಸೇರಿದಂತೆ 7 ರಚನೆಯ ವಿವಿಧ ಮಹಡಿಗಳಿಂದ ರಕ್ಷಿಸಲಾಗಿದೆ ಎಂದು ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗೋರೆಗಾಂವ್ ಪಶ್ಚಿಮದಲ್ಲಿರುವ ಜೈ ಸಂದೇಶ್ ಕಟ್ಟಡದಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಬಿಎಂಸಿ ಅಧಿಕಾರಿ ತಿಳಿಸಿದ್ದಾರೆ.
ಬೆಂಕಿಗೆ ಆಹುತಿಯಾದ ವ್ಯಕ್ತಿಗಳನ್ನು ಜೋಗೇಶ್ವರಿಯಲ್ಲಿರುವ ಟ್ರಾಮಾ ಸೆಂಟರ್ ಮತ್ತು ಜುಹೂನಲ್ಲಿರುವ ಸಿವಿಕ್-ರನ್ ಕೂಪರ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದರು. ಅವರಲ್ಲಿ ಇಬ್ಬರು ಅಪ್ರಾಪ್ತರು ಮತ್ತು ಮಹಿಳೆಯರು ಸೇರಿದಂತೆ 7 ಮಂದಿ ಮೃತಪಟ್ಟಿದ್ದಾರೆ.
ಚಿಕಿತ್ಸೆ ವೇಳೆ ಮತ್ತೋರ್ವ ಮೃತಪಟ್ಟಿದ್ದು, ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
ಪ್ರಜ್ವಲ್ ರೇವಣ್ಣ ಬಗ್ಗೆ ನನಗೆ ಏನೂ ಗೊತ್ತಿಲ್ಲ…
ಭ್ರಷ್ಟಾಚಾರದ ಪೆನ್ ಡ್ರೈವ್ ನಿಮಗೆ ಕೊಡುತ್ತೇನೆ ಅದರ ವಿರುದ್ಧ ಕ್ರಮ ತೆಗೆದುಕೊಳ್ಳುವ ತಾಕತ್ತು ಇದೆಯಾ..?
E ಪಾಸ್ ಕಡ್ಡಾಯ
ಆರು ಮರಿಗಳಿಗೆ ಜನ್ಮ ನೀಡಿದ ಚಾರ್ಲಿ
ಚುನಾವಣೆಯಲ್ಲಿ "ಕೈ" ಅಭ್ಯರ್ಥಿಯ ಗಿಫ್ಟ್ ಬಾಕ್ಸ್ ಸೀಜ್
ಗಿಫ್ಟ್ "ಪೊಲಿಟಿಕ್ಸ್"
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.