ಮನೆ ಅಪರಾಧ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಪ್ರಯಾಣಿಕರು ಪಾರು

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಪ್ರಯಾಣಿಕರು ಪಾರು

0

ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ಶನಿವಾರ ನಡೆದಿದೆ.

Join Our Whatsapp Group

ಚಿಕ್ಕಮಗಳೂರಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಸರಸ್ವತಿಪುರ ಗೇಟ್ ತಲುಪುತಿದ್ದಂತೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಕೂಡಲೇ ಎಚ್ಚೆತ್ತ ಚಾಲಕ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾನೆ ಈ ವೇಳೆ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಕಾರಿನಿಂದ ಹೊರ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

ಪ್ರಯಾಣಿಕರು ಹೊರಬಂದ ಕೆಲವೇ ಹೊತ್ತಿನಲ್ಲಿ ಇಡೀ ಕಾರಿಗೆ ಬೆಂಕಿ ವ್ಯಾಪಿಸಿದೆ ಈ ವೇಳೆ ಬಂದ ಕಡೂರು ಅಗ್ನಿ ಶಾಮಕ ಠಾಣೆಯ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ಕಾರು ಸಂಪೂರ್ಣ ಸುಟ್ಟು ಕಾರಕಲಾಗಿತ್ತು.

ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.

ಹಿಂದಿನ ಲೇಖನಕಟ್ಟಡದ ಸ್ಲ್ಯಾಬ್ ಕುಸಿದು 2 ಕಾರು, 3 ದ್ವಿಚಕ್ರ ವಾಹನ ಜಖಂ: ತಪ್ಪಿದ ಅನಾಹುತ
ಮುಂದಿನ ಲೇಖನಹಾಟ್ ಫೇಲ್ಯೂರ್: ಭಾಗ-3