ಮೈಸೂರು: ಹುಣಸೂರು ಮೈಸೂರು ರಸ್ತೆಯ ಹೂಟಗಳ್ಳಿ ಸಿಗ್ನಲ್ ಬಳಿ ಚಲಿಸುತ್ತಿದ್ದ ಈಚರ್ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
KA 14 C 3101 ನಂಬರ್ ನ ಈಚರ್ ವಾಹನವು ತರಕಾರಿ ತುಂಬಿಕೊಂಡು ಹುಣಸೂರು ಮೈಸೂರು ಮಾರ್ಗದಲ್ಲಿ ಸಂಚರಿಸುವ ವೇಳೆ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ವಾಹನದಿಂದ ಇಳಿದು ಪಾರಾಗಿದ್ದಾನೆ.
ಬೆಂಕಿಗೆ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆ ಪರಿಣಾಮ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ರಸ್ತೆ ಸಂಚಾರವು ಅಸ್ತವ್ಯಸ್ತಗೊಂಡಿದ್ದು, ಸಂಚಾರಿ ಪೊಲೀಸ್ ಸಿಬ್ಬಂದಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
Saval TV on YouTube