ಮನೆ ರಾಷ್ಟ್ರೀಯ ವಿಶಾಖಪಟ್ಟಣಂ ಮೀನುಗಾರಿಕಾ ಬಂದರಿನಲ್ಲಿ ಅಗ್ನಿಅವಘಡ: 40ಕ್ಕೂ ಹೆಚ್ಚು ದೋಣಿಗಳು ಬೆಂಕಿಗಾಹುತಿ

ವಿಶಾಖಪಟ್ಟಣಂ ಮೀನುಗಾರಿಕಾ ಬಂದರಿನಲ್ಲಿ ಅಗ್ನಿಅವಘಡ: 40ಕ್ಕೂ ಹೆಚ್ಚು ದೋಣಿಗಳು ಬೆಂಕಿಗಾಹುತಿ

0

ಆಂಧ್ರಪ್ರದೇಶ: ವಿಶಾಖಪಟ್ಟಣಂನ ಮೀನುಗಾರಿಕಾ ಬಂದರಿನಲ್ಲಿ ಭಾನುವಾರ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ದೋಣಿಯೊಂದಕ್ಕೆ ಬೆಂಕಿ ಹತ್ತಿದ್ದು ಬಳಿಕ ಬೆಂಕಿ ಅಕ್ಕಪಕ್ಕದ ದೋಣಿಗಳಿಗೂ ವ್ಯಾಪಿಸಿದ ಪರಿಣಾಮ ಸುಮಾರು ನಲ್ವತ್ತಕ್ಕೂ ಹೆಚ್ಚು ದೋಣಿಗಳು ಸುಟ್ಟು ಕರಕಲಾಗಿವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಈ ನಡುವೆ ಉದ್ದೇಶಪೂರ್ವಕವಾಗಿಯೇ ಯಾರೋ ಅಪರಿಚಿತರು ದೋಣಿಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈಗಾಗಲೇ 40 ಕ್ಕೂ ಹೆಚ್ಚು ದೋಣಿಗಳು ಸುಟ್ಟು ಕರಕಲಾಗಿವೆ ಎಂದ ಸ್ಥಳೀಯರು ತಿಳಿಸಿದ್ದಾರೆ.

ಬೆಂಕಿಯನ್ನು ನಂದಿಸಲು ವಿಶಾಖಪಟ್ಟಣಂ ಅಂಚೆ ಪ್ರಾಧಿಕಾರದಿಂದ ವಿಶೇಷ ಅಗ್ನಿಶಾಮಕ ದೋಣಿಯನ್ನು ತಂದಿರುವ  ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.

ಅವಘಡದ ವೇಳೆ ಬೋಟ್ ಗಳಲ್ಲಿ ಮಲಗಿದ್ದವರು ಬೆಂಕಿಗೆ ಆಹುತಿಯಾಗಿರಬಹುದು ಎಂದು ಕಾರ್ಮಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಘಟನೆಯಿಂದ ಲಕ್ಷಗಟ್ಟಲೆ ಆಸ್ತಿ ನಷ್ಟವಾಗಿದೆ ಎಂದು ಬೋಟ್ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸುಮಾರು 25 ರಿಂದ 30 ಕೋಟಿ ಮೌಲ್ಯದ ಆಸ್ತಿ ಹಾನಿಯಾಗಿದೆ. ಅವಘಡದ ವೇಳೆ ಕೆಲವು ಬೋಟ್ ಗಳು ಆಗ ತಾನೇ ಮೀನುಗಾರಿಕೆ ಮುಗಿಸಿ ಮೀನುಗಾರಿಕಾ ಬಂದರಿಗೆ ಬಂದಿದ್ದವು. ಕೆಲವು ಬೋಟ್ ಗಳು ಇಂಧನ ತುಂಬಿಸಿಕೊಂಡು ಮೀನುಗಾರಿಕೆಗೆ ತೆರಳಲು ಸಿದ್ಧತೆ ನಡೆಸಿದ್ದವು. ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಇದರಿಂದ ಮಾರಾಟಕ್ಕೆ ಸಿದ್ಧವಾಗಿದ್ದ ಮತ್ಸ್ಯ ಸಂಪತ್ತೆಲ್ಲ ಸುಟ್ಟು ಬೂದಿಯಾಗಿದೆ.

ಹಿಂದಿನ ಲೇಖನಕಡು ಭ್ರಷ್ಟ ಆಯುಷ್ ಲೈಸೆನ್ಸಿಂಗ್ ಅಥಾರಿಟಿ
ಮುಂದಿನ ಲೇಖನದ್ವಿಚಕ್ರ ವಾಹನಗಳ ಮುಖಾಮುಖಿ ಢಿಕ್ಕಿ: ಮೂವರ ಸ್ಥಿತಿ ಗಂಭೀರ