ಮನೆ ರಾಷ್ಟ್ರೀಯ ದೆಹಲಿಯ ಪಾದರಕ್ಷೆ ಕಾರ್ಖಾನೆಯಲ್ಲಿ ಬೆಂಕಿ: ಇಬ್ಬರು ಸಾವು, ಹಲವರಿಗೆ ಗಾಯ

ದೆಹಲಿಯ ಪಾದರಕ್ಷೆ ಕಾರ್ಖಾನೆಯಲ್ಲಿ ಬೆಂಕಿ: ಇಬ್ಬರು ಸಾವು, ಹಲವರಿಗೆ ಗಾಯ

0

ನವದೆಹಲಿ(Newdelhi): ದೆಹಲಿಯ ನರೆಲಾ ಕೈಗಾರಿಕಾ ಪ್ರದೇಶದಲ್ಲಿರುವ ಪಾದರಕ್ಷೆ ತಯಾರಿಕೆ ಕಾರ್ಖಾನೆಯಲ್ಲಿ ಮಂಗಳವಾರ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಪತ್ತೆಹಚ್ಚಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅಗ್ನಿಶಾಮಕ ದಳದ ಅಧಿಕಾರಿಗಳು, ನರೆಲಾ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಮೂವರನ್ನು ರಕ್ಷಿಸಲಾಗಿದೆ.

ಇನ್ನೂ ಹಲವರು ಕಾರ್ಖಾನೆಯಲ್ಲಿ ಸಿಲುಕಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.

ಹಿಂದಿನ ಲೇಖನಕನ್ನಡ ನಾಡಿಗೆ ಭಾರತದ ಭವಿಷ್ಯ ಬರೆಯುವ ಶಕ್ತಿ ಇದೆ: ಸಿಎಂ ಬೊಮ್ಮಾಯಿ
ಮುಂದಿನ ಲೇಖನಉಡುಪಿ: ಆರು ಅಂಗಡಿಗಳ ಬೀಗ ಮುರಿದು ನಗದು ದೋಚಿದ ಕಳ್ಳರು