ಮನೆ ರಾಷ್ಟ್ರೀಯ ದೆಹಲಿಯ ನಾಲ್ಕು ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ: ನಾಲ್ವರು ಸಾವು

ದೆಹಲಿಯ ನಾಲ್ಕು ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ: ನಾಲ್ವರು ಸಾವು

0

ನವದೆಹಲಿ: ದೆಹಲಿಯ ಶಾಸ್ತ್ರಿ ನಗರದಲ್ಲಿ ಗುರುವಾರ ಮುಂಜಾನೆ ನಾಲ್ಕು ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ವರು ಮೃತಪಟ್ಟ ಘಟನೆ ನಡೆದಿದೆ.

ಗುರುವಾರ ಮುಂಜಾನೆ ಸುಮಾರು ೫.೩೦ರ ಸುಮಾರಿಗೆ ಕಟ್ಟಡದ ಪಾರ್ಕಿಂಗ್ ಏರಿಯಾದಲ್ಲಿ ಕಾಣಿಸಿಕೊಂಡ ಬೆಂಕಿ ಕಟ್ಟಡಕ್ಕೆ ಆವರಿಸಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಅವಘಡದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಪತಿ- ಪತ್ನಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರನ್ನು ಮನೋಜ್ (30), ಸುಮನ್ (28) ಮತ್ತು ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿ, ಗೀತಾ ಕಾಲೋನಿ ಬಳಿಯ ಶಾಸ್ತ್ರಿನಗರದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ನಮಗೆ ಬೆಳಿಗ್ಗೆ 5:20 ರ ಸುಮಾರಿಗೆ ಕರೆ ಬಂದಿತು. ಕೂಡಲೇ ದೆಹಲಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಕೂಡಲೇ ನಮ್ಮ ತಂಡ ಅವಘಡ ಸಂಭವಿಸಿದ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಕ್ಕೆ ಮುಂದಾದೆವು, ಅಲ್ಲದೆ ಘಟನಾ ಸ್ಥಳಕ್ಕೆ ನಾಲ್ಕು ಅಗ್ನಿ ಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿತ್ತು ಸಾಕಷ್ಟು ಪ್ರಯತ್ನದ ಬಳಿಕ ಬೆಂಕಿ ನಂದಿಸಲು ಸಾಧ್ಯವಾಯಿತು ಈ ವೇಳೆ ನಾಲ್ವರು ಮೃತಪಟ್ಟಿದ್ದರು ಎಂದು ಹೇಳಿದ್ದಾರೆ.

ಘಟನೆಯಲ್ಲಿ ಮೂವರು ಪುರುಷರು, ನಾಲ್ವರು ಮಹಿಳೆಯರು ಮತ್ತು ಇಬ್ಬರು ಮಕ್ಕಳನ್ನು ರಕ್ಷಿಸಿ ಹೆಡ್ಗೆವಾರ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಿಂದಿನ ಲೇಖನಉಡುಪಿ: ತನ್ನ ಸ್ವಂತ ಬಸ್ ಡಿಕ್ಕಿ ಹೊಡೆದು ಮೃತಪಟ್ಟ ಮಾಲೀಕ
ಮುಂದಿನ ಲೇಖನಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ: ಪ್ರಹ್ಲಾದ್​ ಜೋಶಿ