ನೆಲಮಂಗಲ: ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೀಗೆಹಳ್ಳಿ ಗೇಟ್ ಬಳಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಉದಯ್ ಭಾನು(40) ಮತ್ತು ಬಿಹಾರ ಮೂಲದ ರೋಷನ್(23) ಮೃತ ಕಾರ್ಮಿಕರು. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಗುತ್ತಿಗೆದಾರ ಮತ್ತು ಇಂಜಿನಿಯರ್ ಸತೀಶ್ಗೆ ಸೇರಿದ ಶಿವಾನಿ ಗ್ರೀನ್ ಲೇಔಟ್ನಲ್ಲಿರುವ 3 ಅಂತಸ್ತಿನ ಕಟ್ಟಡದಲ್ಲಿ ಘಟನೆ ನಡೆದಿದೆ. ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ವುಡ್ ವರ್ಕ್ಸ್ ಕೆಲಸ ಮಾಡಲಾಗುತ್ತಿತ್ತು. ಈ ವೇಳೆ ನಿರ್ಮಾಣ ಹಂತದ ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ.
Saval TV on YouTube