ಮನೆ ರಾಜ್ಯ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ: ಎರಡು ವಾಹನ ಭಸ್ಮ

ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ: ಎರಡು ವಾಹನ ಭಸ್ಮ

0

ಹಾವೇರಿ: ಪಟಾಕಿ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಎರಡು ವಾಹನಗಳು ಸುಟ್ಟು ಭಸ್ಮವಾದ ಘಟನೆ ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ನಡೆದಿದೆ.

ವೀರೇಶ ಸಾತೇನಹಳ್ಳಿ ಎಂಬವರಿಗೆ ಸೇರಿದ ಭೂಮಿಕ ಟ್ರೇಡರ್ಸ್ ಎಂಬ ಪಟಾಕಿ ಅಂಗಡಿ ಅಗ್ನಿ ಅವಘಡದಿಂದ ಸುಟ್ಟು ಕರಕಲಾಗಿದ್ದು,  ಅಂಗಡಿಯಲ್ಲಿದ್ದ ಬೈಕ್ ಹಾಗೂ ಟಾಟಾ ಏಸ್ ವಾಹನ ಸುಟ್ಟು ಭಸ್ಮವಾಗಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದರು.

ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಿಂದಿನ ಲೇಖನವಿನೋದ್ ಪ್ರಭಾಕರ್ ನಟನೆಯ ‘ಫೈಟರ್’ ಚಿತ್ರದ ಟೀಸರ್ ರಿಲೀಸ್
ಮುಂದಿನ ಲೇಖನಏಷ್ಯಾ ಕಪ್‌: ಮೊದಲೆರಡು ಪಂದ್ಯಗಳಿಂದ ಹೊರಗುಳಿದ ಕೆ.ಎಲ್ ರಾಹುಲ್