Saval TV on YouTube
ವಿಶಾಖಪಟ್ಟಣಂ(Vishakhapatnam): ಪರವಾಡ ಲಾರಸ್ ಫಾರ್ಮಾ ಲ್ಯಾಬ್ಸ್ ಲಿಮಿಟೆಡ್ ಕಂಪನಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಆಂಧ್ರದ ಅನಕಾಪಲ್ಲಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಓರ್ವ ಕಾರ್ಮಿಕ ಗಂಭೀರ ಗಾಯಗೊಂಡಿದ್ದಾನೆ. ನಿರ್ವಹಣೆ ಕಾರ್ಯ ನಡೆಯುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ರಾಜ್ಯ ಕೈಗಾರಿಕಾ ಸಚಿವ ಅಮರನಾಥ್ ಈ ಬಗ್ಗೆ ಮಾತಾನಾಡಿ, ಘಟನೆಯಲ್ಲಿ ಗಂಭೀರ ಗಾಯಗೊಂಡ ಕಾರ್ಮಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಅವಘಡದ ಬಗ್ಗೆ ಸಿಎಂ ಜಗನ್ ಅವರಿಗೆ ಮಾಹಿತಿ ನೀಡಿದ್ದೇನೆ. ಸಿಎಂ ಮೃತ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರವವನ್ನು ಘೋಷಿಸಿದ್ದಾರೆ ಎಂದು ಹೇಳಿದ್ದಾರೆ.
ಅವಘಡದ ಕಾರಣವನ್ನು ತಿಳಿಯಲು ತನಿಖೆಗೆ ಆದೇಶಿಸಲಾಗಿದೆ.