ಮನೆ ರಾಷ್ಟ್ರೀಯ ಯುದ್ದ ನೌಕೆ ಐಎನ್ಎಸ್ ವಿಕ್ರಮಾದಿತ್ಯದಲ್ಲಿ ಅಗ್ನಿ ಅವಘಡ

ಯುದ್ದ ನೌಕೆ ಐಎನ್ಎಸ್ ವಿಕ್ರಮಾದಿತ್ಯದಲ್ಲಿ ಅಗ್ನಿ ಅವಘಡ

0

ಬೆಂಗಳೂರು(Bengaluru): ಯುದ್ದ ನೌಕೆ ಐಎನ್ಎಸ್ ವಿಕ್ರಮಾದಿತ್ಯ ನೌಕೆಯ ಕಾರವಾರದ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲಾ.

ಯುದ್ದ ನೌಕೆಯಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಭಾರತೀಯ ನೌಕಾಪಡೆ ಸಿಬ್ಬಂದಿಗಳಲ್ಲಿ ಆತಂಕ ಸೃಷ್ಟಿಸಿತು. ಸದ್ಯ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ತಕ್ಷಣ ಎಚ್ಚೆತ್ತುಕೊಂಡು ನೌಕಾ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅವಘಡಕ್ಕೆ ಕಾರಣವೇನೆಂದು ತಿಳಿಯಲು ಅಧಿಕಾರಿಗಳು ತನಿಖೆಗೆ ಸೂಚಿಸಿದರು.