ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಮಧ್ಯಾಹ್ನ ಕಾಣಿಸಿಕೊಂಡಿದ್ದ ಬೆಂಕಿ, ಮಧ್ಯರಾತ್ರಿಯಾದರೂ ಆರಿಲ್ಲ.
ಬೆಂಕಿಯು ವ್ಯಾಪಕವಾಗಿ ಹರಡುತ್ತಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಕಿಡಿಗೇಡಿಗಳು ಬೆಂಕಿ ಹಾಕಿರಬಹುದು ಎಂದು ಶಂಕಿಸಲಾಗಿದೆ. ಬೀಡಿ, ಸಿಗರೇಟು ಸೇದುವವರು ಬೆಂಕಿಕಡ್ಡಿ ಹಚ್ಚಿ ಸರಿಯಾಗಿ ಆರಿಸದೆ ಬಿಸಾಡಿದ್ದರಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.














