ತಮಿಳುನಾಡು: ಕಾರ್ಖಾನೆಯಲ್ಲಿ ಪಟಾಕಿ ಸ್ಪೋಟಗೊಂಡು 9 ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ.
ಜನವಸತಿ ಪ್ರದೇಶದಲ್ಲಿದ್ದ ಗೋಡೌನ್ ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪಟಾಕಿಯನ್ನು ಶೇಖರಣೆ ಮಾಡಿ ಇಡಲಾಗಿತ್ತು. ಏಕಾಏಕಿ ಪಟಾಕಿ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಪಟಾಕಿಗಳು ಸ್ಪೋಟಗೊಂಡು ಈ ಘಟನೆ ನಡೆದಿದೆ. ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದರೇ 50ಕ್ಕೂ ಹೆಚ್ಚುಮಂದಿಗೆ ಗಂಭೀರ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪಟಾಕಿ ಸ್ಪೋಟಕ್ಕೆ ಅಕ್ಕಪಕ್ಕದ 7ರಿಂದ 8 ಮನೆಗಳಿಗೂ ಹಾನಿಯಾಗಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಕೃಷ್ಣಗಿರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.