Saval TV on YouTube
ಹಾಸನ(Hassan): ತಡರಾತ್ರಿ ಹೇಮಾವತಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದಾಗ ಅಪರಿಚಿತರ ಗುಂಡಿನ ದಾಳಿಗೆ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸೋಮವಾರ ಸಂಜೆ ಸಕಲೇಶಪುರ ತಾಲೂಕಿನ ತಂಬಲಗೇರಿ ಗ್ರಾಮದ ಹೊರವಲಯದಲ್ಲಿ ಅಪರಿಚಿತರಿಂದ ನಡೆದ ಗುಂಡಿನ ದಾಳಿಯಲ್ಲಿ ಯುವಕ ನವೀನ್(39) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ನವೀನ್ ಜೊತೆಯಲ್ಲಿ ಅವರ ಗೆಳೆಯರಾದ ದಯಾನಂದ್, ಪದ್ಮನಾಭ್, ರಾಜಾಚಾರಿ ಇದ್ದರು. ಈ ದಾಳಿಯಲ್ಲಿ ದಯಾನಂದ್ ಮತ್ತು ಪದ್ಮಾನಾಭ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.














