Saval TV on YouTube
ಮೈಸೂರು(Mysuru): ನವೆಂಬರ್ ಕೊನೆ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡುತ್ತೇವೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೇನು ಜೋತಿಷ್ಯ ನೋಡುವುದಿಲ್ಲ. ಶೂನ್ಯ ಮಾಸದಲ್ಲಿ ಹುಟ್ಟಿದ ಮಕ್ಕಳೆಲ್ಲಾ ಏನು ಸತ್ತು ಹೋಗ್ತಾರಾ? ನಮಗೆ ರಾಹುಕಾಲ, ಗುಳಿಕ ಕಾಲ, ಯಮಗಂಡ ಕಾಲ ಯಾವುದು ಇಲ್ಲ. ಎಲ್ಲಾ ಒಳ್ಳೆಯ ಕಾಲವೇ ಎಂದು ಹೇಳಿದರು.
ಕಾಂಗ್ರೆಸ್ ಬಸ್ ಯಾತ್ರೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಬಸ್ ಸಿದ್ದವಾಗುತ್ತಿದೆ. ಕೋಲಾರಕ್ಕೆ ಹೋಗಿ ಟೆಸ್ಟ್ ರನ್ ಆಗಿದೆ. ನಾನೊಂದು ಟೀಂ, ಡಿ.ಕೆ ಶಿವಕುಮಾರ್ ಒಂದು ಟೀಂ ಆಗಿ ಪ್ರಚಾರ ಮಾಡುತ್ತೇವೆ ಎಂದರು.
ಬಲವಂತದ ಮತಾಂತರಕ್ಕೆ ನನ್ನ ವಿರೋಧವಿದೆ. ಯಾರನ್ನೂ ಬಲವಂತವಾಗಿ ಮತಾಂತರ ಮಾಡಕೂಡದು. ಯಾರು ಯಾವ ಧರ್ಮ ಬೇಕಾದರೂ ಪಾಲನೆ ಮಾಡಬಹುದು. ಸುಪ್ರೀಂ ಕೋರ್ಟ್ ಆದೇಶದ ಪರ ನಾವಿದ್ದೇವೆ ಎಂದು ತಿಳಿಸಿದರು.