ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಿಂದ ಜುಲೈ 3ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಿಂದ ಜುಲೈ 3 ರವರೆಗೆ ನಡೆಯಲಿದೆ. ಈ ವೇಳೆ ಹೊಸದಾಗಿ ಚುನಾಯಿತ ಸದಸ್ಯರ ಪ್ರಮಾಣ ವಚನ ಸ್ವೀಕಾರ ಹಾಗೂ ಸ್ಪೀಕರ್ ಆಯ್ಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ರಾಜ್ಯಸಭೆಯ 264ನೇ ಅಧಿವೇಶನವು ಜೂನ್ 27 ರಂದು ಪ್ರಾರಂಭವಾಗಿ ಜುಲೈ 3ರಂದು ಮುಕ್ತಾಯಗೊಳ್ಳಲಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ರಾಷ್ಟ್ರಕ್ಕೆ ಸೇವೆ ಸಲ್ಲಿಸುವುದು ನಮ್ಮ ‘ಪವಿತ್ರ ಕರ್ತವ್ಯ’. 140 ಕೋಟಿ ಭಾರತೀಯರ ಆಕಾಂಕ್ಷೆಗಳ ಈಡೇರಿಕೆಗೆ ಚರ್ಚೆ ನಡೆಸಲು ಸಂಸತ್ತು ಪರಿಪೂರ್ಣ ವೇದಿಕೆಯಾಗಿದೆ ಎಂದು ರಿಜಿಜು ಹೇಳಿದ್ದಾರೆ.
Saval TV on YouTube