ಮನೆ ಅಪರಾಧ ಮೈಸೂರಲ್ಲಿ ಡೆಂಗ್ಯೂಗೆ ಮೊದಲ ಬಲಿ: ಆರೋಗ್ಯಾಧಿಕಾರಿ ಸಾವು

ಮೈಸೂರಲ್ಲಿ ಡೆಂಗ್ಯೂಗೆ ಮೊದಲ ಬಲಿ: ಆರೋಗ್ಯಾಧಿಕಾರಿ ಸಾವು

0

ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಸಮುದಾಯ ಆರೋಗ್ಯಾಧಿಕಾರಿಯೊಬ್ಬರು ಡೆಂಗ್ಯೂಗೆ ಬಲಿಯಾಗಿದ್ದಾರೆ.

Join Our Whatsapp Group

ನಾಗೇಂದ್ರ(35 ) ಮೃತ ಆರೋಗ್ಯಾಧಿಕಾರಿಯಾಗಿದ್ದಾರೆ. ಜಿಲ್ಲೆಯಲ್ಲಿ ಡೆಂಗ್ಯೂಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ. ಇವರು ಹುಣಸೂರು ತಾಲೂಕಿನ ಗುರುಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಹುಣಸೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ ಕಳೆದ ಸೋಮವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಇವರು ಡೆಂಗ್ಯೂ ಸೋಂಕಿನಿಂದ ಬಳಲುತ್ತಿದ್ದರು.

479 ಡೆಂಗ್ಯೂ ಸಕ್ರಿಯ ಪ್ರಕರಣಗಳು: ಮೈಸೂರು ಜಿಲ್ಲೆಯಲ್ಲಿ ಸದ್ಯಕ್ಕೆ 479 ಡೆಂಗ್ಯೂ ಸಕ್ರಿಯ ಪ್ರಕರಣಗಳು ಇವೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ ಹೆಚ್ಚಾಗದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಶುಕ್ರವಾರ ಡೆಂಗ್ಯೂ ಡ್ರೈ ಡೇಯನ್ನ ಆಚರಿಸಲಾಗುತ್ತಿದೆ. ಜೊತೆಗೆ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲೂ ಜನ ಸಾಮಾನ್ಯರಿಗೆ ಅರಿವು ಮೂಡಿಸುವ ಕೆಲಸವನ್ನ ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತರು ಮಾಡುತ್ತಿದ್ದಾರೆ.

ಹಿಂದಿನ ಲೇಖನಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು
ಮುಂದಿನ ಲೇಖನಮುಂಬಡ್ತಿ ಪಡೆದು ವರ್ಗಾವಣೆಯಾದ ಅಧಿಕಾರಿಗಳಿಗೆ ಹಲವು ನಿಯಮ