ಮನೆ ರಾಜಕೀಯ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ನಾಳೆಯಿಂದ ಐದು ದಿನ ಕಾಂಗ್ರೆಸ್ ಪ್ರತಿಭಟನೆ

ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ನಾಳೆಯಿಂದ ಐದು ದಿನ ಕಾಂಗ್ರೆಸ್ ಪ್ರತಿಭಟನೆ

0

ಬೆಂಗಳೂರು(Bengaluru): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಸಂಬಂಧಿಸಿದಂತೆ ಮತ್ತು ಈಶ್ವರಪ್ಪ ರಾಜೀನಾಮೆ ನೀಡುವಂತೆ ಒತ್ತಾಯಿಸಿ ನಾಳೆಯಿಂದ ಐದು ದಿನ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಜಂಟಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಾಳೆ ಬೆಳಗ್ಗೆ 10.30ಕ್ಕೆ ಸಿಎಂ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದರು.

ಸಂತೋಷ್ ಪಾಟೀಲ್ ಕುಟುಂಬದವರನ್ನು ಇಂದು ಭೇಟಿ ಮಾಡಿ ಧೈರ್ಯ ತುಂಬಲಿದ್ದೇವೆ. ಸಂತೋಷ್​ ಅವರ ಮರಣೋತ್ತರ ಪರೀಕ್ಷೆ ವಿಳಂಬವಾಗುತ್ತಿದೆ. ಯಾಕೆ ವಿಳಂಬ ಅನ್ನೋದು ಗೊತ್ತಾಗುತ್ತಿಲ್ಲ. ಈ ಪ್ರಕರಣ ದೇಶದಲ್ಲೇ ದೊಡ್ಡ ದುರಂತ. ಅವರು ರಾಜೀನಾಮೆ ನೀಡುತ್ತಾರೋ ಇಲ್ಲವೋ ಗೊತ್ತಿಲ್ಲ. ಆದ್ರೆ ಮೊದಲು ಅವರನ್ನು ಅರೆಸ್ಟ್ ಮಾಡಬೇಕು. ಸರ್ಕಾರ, ಪೊಲೀಸರು ಅವರ ರಕ್ಷಣೆಗೆ ಹೊರಟಿದ್ದಾರೆ ಎಂದು ಅವರು ದೂರಿದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಸಚಿವ ಈಶ್ವರಪ್ಪನವರ ಮೇಲೆ ಭ್ರಷ್ಟಾಚಾರ ಆರೋಪ ಹೊರಿಸಿ ಸಂತೋಷ್ ಪಾಟೀಲ್ ಕುಟುಂಬದವರು ದೂರು ಕೊಟ್ಟಿದ್ದಾರೆ. ಆದರೆ ಪೊಲೀಸರು ಭ್ರಷ್ಟಾಚಾರ ಅಡಿಯಲ್ಲಿ ಈಶ್ವರಪ್ಪರ ಮೇಲೆ ಕೇಸ್ ಹಾಕಿಲ್ಲ. ಇಡೀ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪವಿದೆ. ರಾಜ್ಯ ಗುತ್ತಿಗೆದಾರರ ಸಂಘವೇ ಈ ಆರೋಪ ಮಾಡಿದೆ. ಇಡೀ ದೇಶದಲ್ಲಿ ಕರ್ನಾಟಕ ಅತ್ಯಂತ ಭ್ರಷ್ಟ ಸರ್ಕಾರ ಎಂದು ಆರೋಪಿಸಿದರು.

ಹಿಂದಿನ ಲೇಖನಐವರ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಮುಂದಿನ ಲೇಖನಮುಕ್ತ ವಿವಿ ಹಗರಣ ಸಿಬಿಐ ತನಿಖೆಗೆ ವಹಿಸಿ: ಗೋ.ಮಧುಸೂದನ್ ಆಗ್ರಹ