ಮನೆ ರಾಜ್ಯ ಗೌರಿ-ಗಣೇಶ ಹಬ್ಬ: ಹೆಚ್ಚುವರಿಯಾಗಿ 500 ವಿಶೇಷ ಬಸ್‌ಗಳ ಸಂಚಾರ

ಗೌರಿ-ಗಣೇಶ ಹಬ್ಬ: ಹೆಚ್ಚುವರಿಯಾಗಿ 500 ವಿಶೇಷ ಬಸ್‌ಗಳ ಸಂಚಾರ

0

ಬೆಂಗಳೂರು (Bengaluru): ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಹೆಚ್ಚುವರಿಯಾಗಿ 500 ವಿಶೇಷ ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.

ಇದೇ 29 ಮತ್ತು 30ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ವಿಶೇಷ ಬಸ್‌ಗಳು ಹೊರಡಲಿವೆ. 31ರಂದು ಬೆಂಗಳೂರಿಗೆ ವಾಪಸ್ ಬರಲಿವೆ.

ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಿಂದಲೂ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ ಎಂದು ಪ್ರಕಟಣೆ ತಿಳಿಸಿದೆ.

ಮೆಜೆಸ್ಟಿಕ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿಗೆ ಬಸ್‌ಗಳು ಸಂಚಾರ ಮಾಡಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ತೆರಳಲಿವೆ. ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಬಸ್‌ಗಳು ಸಂಚರಿಸಲಿವೆ.

ಆಸನಗಳನ್ನು ಮುಂಗಡವಾಗಿ ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ ಅನ್ನು ಒಟ್ಟಿಗೆ ಕಾಯ್ದಿರಿಸಿದಾಗ ಹಿಂದಿರುಗುವ ಪ್ರಯಾಣ ದರದಲ್ಲಿ ಶೇ.10 ರಷ್ಟು ರಿಯಾಯಿತಿ ಕೊಡಲಾಗುವುದು.

ಹಿಂದಿನ ಲೇಖನಬಿಡಿಎ ಆಯುಕ್ತ ಎಂ.ಬಿ.ರಾಜೇಶ ಗೌಡರನ್ನು ವರ್ಗಾವಣೆ ಮಾಡಿ: ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ
ಮುಂದಿನ ಲೇಖನಅಗ್ನಿ ಸ್ಟೀಲ್ಸ್ ಕಂಪನಿಯಲ್ಲಿದೆ ಉದ್ಯೋಗ: ಮೈಸೂರಿನಲ್ಲಿ ನಾಳೆ ಇಂಟರ್ ವ್ಯೂ