ಮನೆ ಅಪರಾಧ ಬೆಂಗಳೂರಿನ ಫೈವ್ ಸ್ಟಾರ್ ಹೋಟೆಲ್ ​ಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ

ಬೆಂಗಳೂರಿನ ಫೈವ್ ಸ್ಟಾರ್ ಹೋಟೆಲ್ ​ಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ

0
ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರಿನ ಮೂರು ಫೈವ್ ಸ್ಟಾರ್ ಹೋಟೆಲ್​ಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಸಂದೇಶ ಬಂದಿದೆ.

Join Our Whatsapp Group

ಎಲೆಕ್ಟ್ರಾನಿಕ್ ಸಿಟಿ ಬಳಿಯ ಸ್ಟಾರ್​ ಹೋಟೆಲ್​ಗೆ ಬೆದರಿಕೆ ಸಂದೇಶ ಬಂದಿದ್ದು, ಮಧ್ಯರಾತ್ರಿ 2 ಗಂಟೆಗೆ ಬಾಂಬ್​ ಸ್ಫೋಟಿಸುವುದಾಗಿ ಉಲ್ಲೇಖಿಸಲಾಗಿದೆ. ಗುರುವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬೆಳಕಿಗೆ ಬಂದಿದೆ. ತಕ್ಷಣವೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಹೋಟೆಲ್​ ಗೆ ಪೊಲೀಸರು ಭೇಟಿ ನೀಡಿದ್ದಾರೆ. ಬಾಂಬ್ ಸ್ಕ್ವಾಡ್ ಸಹ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದೆ.

ಕೆಲವೇ ದಿನಗಳ ಹಿಂದೆ, ಅಂದರೆ ಮೇ 13ರಂದು ಅಮೃತಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಅದರ ಮರುದಿನವೇ ಬೆಂಗಳೂರು ದಕ್ಷಿಣ ತಾಲೂಕು ವ್ಯಾಪ್ತಿಯ ಕಗ್ಗಲಿಪುರದ ಕನಕಪುರ ರಸ್ತೆ ಸೋಮನಹಳ್ಳಿ ಬಳಿಯ ಈಡಿಫೈ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಪರಿಶೀಲನೆಯ ನಂತರ ಈ ಎರಡೂ ಬೆದರಿಕೆ ಸಂದೇಶಗಳು ಹುಸಿ ಎಂಬುದು ತಿಳಿದುಬಂದಿತ್ತು.

ಕಳೆದ ತಿಂಗಳು ಜಾಲಹಳ್ಳಿ ಠಾಣೆ ವ್ಯಾಪ್ತಿಯ ಎಚ್‌ಎಂಟಿ ಮೈದಾನ ಬಳಿಯ ಕದಂಬ ಹೋಟೆಲ್ ಸುತ್ತಮುತ್ತ ಬಾಂಬ್ ಇರಿಸಲಾಗಿದೆ ಎಂದು ಜಾಲಹಳ್ಳಿ ಪೊಲೀಸ್ ಠಾಣೆಗೆ ಅನಾಮಧೇಯ ಪತ್ರ ಬಂದಿದ್ದು ಆತಂಕಕ್ಕೆ ಕಾರಣವಾಗಿತ್ತು. ನಂತರ ಅದು ಹುಸಿ ಬೆದರಿಕೆ ಎಂಬುದು ತಿಳಿದುಬಂದಿತ್ತು.