ಮನೆ ರಾಷ್ಟ್ರೀಯ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡ ಕುಸಿತ: ಇಬ್ಬರ ಸಾವು

ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡ ಕುಸಿತ: ಇಬ್ಬರ ಸಾವು

0

ಕೊಲ್ಕತ್ತಾ: ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಕೋಲ್ಕತ್ತಾದಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಇದುವರೆಗೆ ಹದಿನಾಲ್ಕು ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಅವಶೇಷಗಳಡಿ ಸಿಲುಕಿದವರ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎನ್ನಲಾಗಿದೆ.

ನಗರದ ಗಾರ್ಡನ್ ರೀಚ್ ಪ್ರದೇಶದಲ್ಲಿದ್ದ ನಿರ್ಮಾಣ ಹಂತದ ಕಟ್ಟಡದವು ಸೋಮವಾರ ನಸುಕಿನ ವೇಳೆ ಕುಸಿದಿದೆ ಪರಿಣಾಮ ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರಲ್ಲಿ ಒಬ್ಬ ಮಹಿಳೆಯನ್ನು ಸ್ಥಳೀಯ ನಿವಾಸಿ ಹಸೀನಾ ಬೀಬಿ ಎಂದು ಗುರುತಿಸಲಾಗಿದೆ ಇನ್ನೊಬ್ಬರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಟ್ಟಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ ವೇಳೆ ಕಟ್ಟಡ ನಿರ್ಮಾಣಕ್ಕೆ ಅಧಿಕೃತ ಅನುಮತಿ ಸಿಕ್ಕಿರಲಿಲ್ಲ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು, ಅಪಘಾತ ಸಂಭವಿಸಿದ ಕೂಡಲೇ ರಕ್ಷಣಾ ಕಾರ್ಯ ಪ್ರಾರಂಭವಾಗಿದೆ. ಘಟನೆಯಿಂದ ಇಬ್ಬರು ಮೃತಪಟ್ಟಿದ್ದಾರೆ, ಐದರಿಂದ ಆರು ಜನರು ಇನ್ನೂ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ಅವರನ್ನೂ ಶೀಘ್ರದಲ್ಲೇ ರಕ್ಷಿಸಲಾಗುವುದು. ವೈದ್ಯಕೀಯ, ಅಗ್ನಿಶಾಮಕ ಮತ್ತು ಇತರ ಇಲಾಖೆಗಳ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಕಟ್ಟಡವನ್ನು ಅಕ್ರಮವಾಗಿ ನಿರ್ಮಿಸಲಾಗಿದೆ. ಅಧಿಕೃತ ಅನುಮತಿ ಕಟ್ಟಡವನ್ನು ನಿರ್ಮಿಸಲು ರಾಜ್ಯ ಆಡಳಿತ ನೀಡಿಲ್ಲ ಎಂದು ಅವರು ಹೇಳಿದ್ದಾರೆ.

ಘಟನೆ ಕುರಿತು ಮಾತನಾಡಿದ ಸಿಎಂ, ಅಪಘಾತದ ತನಿಖೆಗೆ ಆದೇಶ ನೀಡಲಾಗಿದೆ. ಈ ಕಟ್ಟಡ ನಿರ್ಮಾಣದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮೃತರ ಮತ್ತು ಗಾಯಗೊಂಡವರ ಕುಟುಂಬಗಳಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ಘಟನೆಯಿಂದ ಕಟ್ಟಡದ ಹತ್ತಿರವಿದ್ದ ಇತರ ಮನೆಗಳಿಗೆ ಹಾನಿಯಾಗಿವೆ ಅವರಿಗೂ ಸರ್ಕಾರ ಸಹಾಯ ಮಾಡಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.