ಮೈಸೂರು: ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಯಲ್ಲಿ ರಾಜಕೀಯ ಪಿತೂರಿ ಮಾಡಬಾರದು. ಕೊಲೆಗೆ ಹಿಂದುತ್ವದ ಅಜೆಂಡಾ ಫಿಕ್ಸ್ ಮಾಡುವ ಸಂಚನ್ನು ಬಿಜೆಪಿ ಮಾಡುತ್ತಿದೆ. ಎಲ್ಲದಕ್ಕೂ ಹಿಂದುತ್ವದ ಅಜೆಂಡಾ ಫಿಕ್ಸ್ ಮಾಡೋದು ಬಿಜೆಪಿಯ ಚಾಳಿ ಎಂದು ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.
ಅವರು ಮೈಸೂರಿನ ಟಿ. ನರಸೀಪುರದಲ್ಲಿ ಮಾತನಾಡಿ, ವೇಣುಗೋಪಾಲ ನಾಯಕ ಅವರ ಹತ್ಯೆ ಧರ್ಮ, ರಾಜಕೀಯ ವ್ಯಾಪ್ತಿ ಎರಡಕ್ಕೂ ಬರುವುದಿಲ್ಲ ಎಂದರು.
ಬ್ರಿಗೇಡ್ ಕಟ್ಟಿಕೊಂಡು ಹನುಮಂತ ಜಯಂತಿ ಚೆನ್ನಾಗಿಯೆ ಮಾಡಿದ್ದಾರೆ. ಹನುಮ ಜಯಂತಿಗೆ ಯಾರದೆ ಅಡ್ಡಿ ತಕಾರರು ಇರಲಿಲ್ಲ. ಜಯಂತಿ ವೇಳೆ ಬ್ರಿಗೇಡ್ ನಲ್ಲಿದ್ದವರೆ ಬೈಕ್ ನಿಲ್ಲಿಸುವ ವಿಚಾರ, ಪೋಟೋ ವಿಚಾರಕ್ಕೆ ಜಗಳ ನಡೆದಿವೆ. ನಂತರ ಬ್ರಿಗೇಡ್ ನಲ್ಲಿದ್ದವರೆ ಗಲಾಟೆ ಮಾಡಿಕೊಂಡಿದ್ದಾರೆ. ಆ ವೇಳೆ ಈ ಕೊಲೆಯಾಗಿದೆ ಎಂದು ತಿಳಿಸಿದರು.
ಹತ್ಯೆಯ ಪ್ರಕರಣದಲ್ಲಿ ನನ್ನ ಮಗನ ಹೆಸರನ್ನು ಬಿಜೆಪಿ ವಿನಾಃಕಾರಣ ಎಳೆದು ತರುತ್ತಿದೆ. ಈ ಹಿಂದಯೂ ನನ್ನ ಮಗನ ಮೇಲೆ ಹೀಗೆ ವಿನಾಃಕಾರಣ ಆರೋಪ ಮಾಡಿದ್ದರು. ಮಾಫಿಯಾ ಮಾಡಿದ್ದವರೆ ಹಿಂದೆಯೂ ಮಗನ ಮೇಲೆ ಕೇಸ್ ಕೊಟ್ಟಿದ್ದರು ಎಂದರು.
ಬಿಜೆಪಿ ಅವರು ಸುಳ್ಳುನ್ನು ಸತ್ಯ ಮಾಡಲು ಹೊರಟಿದ್ದಾರೆ. ಪೊಲೀಸರ ತನಿಖೆ ಸರಿ ದಾರಿಯಲ್ಲಿ ಇದೆ. ಘಟನೆಯಾದ 6 ಗಂಟೆಯೊಳಗೆ ಆರೋಪಿಗಳ ಬಂಧಿಸಿದ್ದಾರೆ ಎಂದರು.
ಈ ಕೊಲೆ ದೌರ್ಜನ್ಯ ಪ್ರಕರಣ ಅಲ್ಲ. ಆದರೆ ಎಸ್ಸಿ ಎಸ್ಟಿ ಸಮುದಾಯದ ಯಾರಾದರೂ ಈ ರೀತಿ ಕೊಲೆಯಾದರೆ 8 ಲಕ್ಷ ಪರಿಹಾರ ಕೊಡಬಹುದು. ಪರಿಹಾರದ ಮೊದಲ ಕಂತು 4.12 ಲಕ್ಷ ರೂ. ಅನ್ನು ಈಗ ಕೊಟ್ಟಿದ್ದೇವೆ. ಪ್ರಕರಣದ ಚಾರ್ಜ್ ಶೀಟ್ ಆದ ಮೇಲೆ ಉಳಿದ ಹಣ ಕೊಡುತ್ತೇವೆ ಎಂದ ಅವರು ಕೊಲೆಯಾದ ವ್ಯಕ್ತಿಯ ಪತ್ನಿಗೆ ಅನುಕಂಪದ ಆಧಾರದ ಮೇಲೆ ಕೆಲಸ ಕೊಡಿಸಲು ಪ್ರಯತ್ನಿಸುವುದಾಗಿ ಹೇಳಿದರು.