ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನ ಹಾರಾಟ ನಡೆಸಲಿದ್ದು, ಮುಂದಿನ ತಿಂಗಳಿಂದ ಸಂಜೆ ವೇಳೆ ಚೆನ್ನೈ, ಹೈದ್ರಾಬಾದ್ ಗೆ ಸ್ಟಾರ್ ಏರ್ ಲೈನ್ಸ್ ವಿಮಾನ ಹಾರಾಟ ನಡೆಸಲಿವೆ.
ಏರ್ ಪೋರ್ಟ್ ನಿರ್ವಹಣೆಗೆ ತುಂಬಾ ಖರ್ಚು ಬರುತ್ತಿದೆ. ಖರ್ಚು ಸರಿದೂಗಿಸಲು ಸ್ಥಳೀಯವಾಗಿ ಬಂಡವಾಳ ಯೋಜನೆಗೆ ಚಿಂತನೆ ನಡೆದಿದೆ ಎಂದು ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಹೈದರಾಬಾದ್, ತಿರುಪತಿ, ಗೋವಾಕ್ಕೂ ವಿಮಾನ ಹಾರಾಟ
ನವೆಂಬರ್ 17 ರಿಂದ ಸ್ಟಾರ್ ಏರ್ ತನ್ನ ಸೇವೆ ಆರಂಭಿಸಲಿದ್ದು, ಶಿವಮೊಗ್ಗದಿಂದ ತಿರುಪತಿ, ಗೋವಾ, ಹೈದರಾಬಾದ್ ಗೆ ತನ್ನ ಸೇವೆ ಆರಂಭಿಸಲಿದೆ. ಈಗಾಗಲೇ ಸ್ಟಾರ್ ಏರ್ ಲೈನ್ಸ್ ವಿಮಾನಯಾನ ಸಂಸ್ಥೆ ಶಿವಮೊಗ್ಗದಿಂದ ತನ್ನ ಕಾರ್ಯಾಚರಣೆ ಆರಂಭಕ್ಕೆ ಸಿದ್ಧತೆ ಮಾಡಿಕೊಂಡಿದೆ. ಇನ್ನು ಟಿಕೆಟ್ ಬುಕಿಂಗ್ ಪ್ರಕ್ರಿಯೆ ಕೂಡ ಆರಂಭವಾಗಿದೆ.
ಸ್ಟಾರ್ ಏರ್ ವಿಮಾನದ ವೇಳಾಪಟ್ಟಿ
ಶಿವಮೊಗ್ಗದಿಂದ ತಿರುಪತಿ, ಗೋವಾ ಮತ್ತು ಹೈದರಾಬಾದ್ ಗೆ ವಾರದಲ್ಲಿ ಆರು ದಿನ ವಿಮಾನಯಾನ ಸೇವೆ ಆರಂಭಿಸುತ್ತಿದೆ. ಸ್ಟಾರ್ ಏರ್ ವಿಮಾನವು ಬೆಳಗ್ಗೆ 9.30ಕ್ಕೆ ಹೈದರಾಬಾದ್ ನಿಂದ ಹೊರಟು ಅಂದು ಬೆಳಗ್ಗೆ 10.35ಕ್ಕೆ ಶಿವಮೊಗ್ಗ ವಿಮಾನ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ. ಬಳಿಕ ಅದೇ ದಿನ ಬೆಳಗ್ಗೆ 11ಕ್ಕೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 12ಕ್ಕೆ ತಿರುಪತಿ ತಲುಪಲಿದೆ. ತಿರುಪತಿಯಿಂದ ಮಧ್ಯಾಹ್ನ 12.35ಕ್ಕೆ ಹೊರಟು ಮಧ್ಯಾಹ್ನ 1.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದೆ.ಇನ್ನು ಮಧ್ಯಾಹ್ನ 1.55ಕ್ಕೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 2.45ಕ್ಕೆ ಗೋವಾ ತಲುಪಲಿದೆ. ಗೋವಾದಿಂದ ಮಧ್ಯಾಹ್ನ 3.15ಕ್ಕೆ ಹೊರಟು ಸಂಜೆ 4.05ಕ್ಕೆ ಶಿವಮೊಗ್ಗ ತಲುಪಲಿದೆ. ಸಂಜೆ 4.30ಕ್ಕೆ ಶಿವಮೊಗ್ಗದಿಂದ ಹೊರಟು ಸಂಜೆ 5.30ಕ್ಕೆ ಹೈದರಾಬಾದ್ ತಲುಪಲಿದೆ.
ಹೆಚ್ಚಿನ ಮಾಹಿತಿಗೆ 8123002917, 9449502917 ಸಂಪರ್ಕಿಸಬಹುದು.