ಮನೆ ರಾಷ್ಟ್ರೀಯ ದೆಹಲಿಯಲ್ಲಿ ಮಂಜು – ಇಂಡಿಗೋ ವಿಮಾನದಲ್ಲಿ ರಾಜ್ಯದ 21 ಶಾಸಕರು‌ ಲಾಕ್‌..!

ದೆಹಲಿಯಲ್ಲಿ ಮಂಜು – ಇಂಡಿಗೋ ವಿಮಾನದಲ್ಲಿ ರಾಜ್ಯದ 21 ಶಾಸಕರು‌ ಲಾಕ್‌..!

0

ನವದೆಹಲಿ : ದಟ್ಟವಾದ ಮಂಜು, ಹೊಗೆಯಿಂದ ಕರ್ನಾಟಕದ 21 ಶಾಸಕರು ಇಂಡಿಗೋ ವಿಮಾನದ ಒಳಗಡೆಯೇ ಸಿಲುಕಿದ್ದಾರೆ. ಭಾನುವಾರ ಆಯೋಜನೆಗೊಂಡಿದ್ದ ವೋಟ್‌ ಚೋರಿ ಸಮಾವೇಶಕ್ಕೆ ಮಂತ್ರಿಗಳು, ಕಾಂಗ್ರೆಸ್ ಶಾಸಕರು ದೆಹಲಿಗೆ ಆಗಮಿಸಿದ್ದರು.

ಇಂದು ದಾವಣಗೆರೆಯಲ್ಲಿ ನಡೆಯಲಿರುವ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ದೆಹಲಿಯಿಂದ ಬೆಳಗಾವಿಗೆ ಹೋಗುವ ವಿಮಾನ ಏರಿದ್ದರು. ಶಾಸಕರ ವಿಮಾನ ಬೆಳಗ್ಗೆ 5:30ಕ್ಕೆ ದೆಹಲಿಯಿಂದ ಹೊರಡಬೇಕಿತ್ತು. ವಿಮಾನದ ಒಳಗಡೆ ಕುಳಿತುಕೊಂಡ ಬಳಿಕ ದಟ್ಟವಾದ ಹೊಗೆಯಿಂದಾಗಿ ವಿಮಾನ ಟೇಕಾಫ್‌ ಆಗಿಲ್ಲ.

ಸುಮಾರು 4 ಗಂಟೆಯಿಂದ ಶಾಸಕರು ವಿಮಾನದಲ್ಲೇ ಕುಳಿತ್ತಿದ್ದು ಬೆಳಗ್ಗೆ 10 ಗಂಟೆಯಾದರೂ ವಿಮಾನ ಟೇಕಾಫ್‌ ಅಗಿಲ್ಲ. ವಿಮಾನ ಎಷ್ಟು ಗಂಟೆಗೆ ಟೇಕಾಫ್‌ ಆಗಲಿದೆ ಎಂಬ ಮಾಹಿತಿಯನ್ನು ಸಿಬ್ಬಂದಿ ನೀಡಿಲ್ಲ. ದೆಹಲಿಯಲ್ಲಿ ಹವಾಮಾನ ವೈಪರೀತ್ಯದಿಂದ ವಿಮಾನಗಳ ಟೇಕಾಫ್‌ ಮತ್ತು ಲ್ಯಾಂಡಿಂಗ್‌ಗೆ ಸಮಸ್ಯೆಯಾಗಿದೆ.

ವಿಮಾನದಲ್ಲಿ ಯಾರಿದ್ದಾರೆ? – ಕೋನರೆಡ್ಡಿ, ಬಸನಗೌಡ ಬಾದರ್ಲಿ, ಆನಂದ್ ಗಡದೇವರಮಠ, ಹೆಚ್‌ಕೆ ಪಾಟೀಲ್, ಲಕ್ಷ್ಮೀ ಹೆಬಾಳ್ಕರ್, ಶರಣ ಪ್ರಕಾಶ್ ಪಾಟೀಲ್, ರಾಜು ಗೌಡ, ಸಲೀಂ ಅಹಮದ್, ತನ್ವೀರ್ ಸೇಠ್, ಸತೀಶ್ ಜಾರಕಿಹೊಳಿ, ಜಿ ಎಸ್ ಪಾಟೀಲ್, ಮಾಲೀಕಯ್ಯ ಗುತ್ತೇದಾರ್, ಈಶ್ವರ್ ಖಂಡ್ರೆ, ಜೆ ಟಿ ಪಾಟೀಲ್, ತಿಪ್ಪಣ್ಣ ಕಾಮಕನೂರ್, ನಾಗೇಂದ್ರ, ಎಂ ಬಿ ಪಾಟೀಲ್, ಅಲ್ಲಮಪ್ರಭು, ರೆಹಮಾನ್ ಖಾನ್, ಕೆಜೆ ಜಾರ್ಜ್…,