Saval TV on YouTube
ಮೈಸೂರು(Mysuru): ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ಕನ್ನಡ ಪ್ರಾಧ್ಯಾಪಕ, ಸಾಹಿತಿ, ಜಾನಪದ ವಿದ್ವಾಂಸ ಡಾ.ರಾಮೇಗೌಡ (ರಾಗೌ) ಬೆಂಗಳೂರಿನ ಕನ್ನಡ ಜನಶಕ್ತಿ ಕೇಂದ್ರದಿಂದ ನೀಡುವ ‘ಕುವೆಂಪು ಗೌರವ ಪುರಸ್ಕಾರ’ಕ್ಕೆ ಆಯ್ಕೆಯಾಗಿದ್ದಾರೆ.
ಕಾವ್ಯ, ವಿಮರ್ಶೆ, ಸಂಶೋಧನೆ, ಸಂಪಾದನೆ ಹಾಗೂ ಜಾನಪದ ಸಾಹಿತ್ಯ ಪ್ರಾಕಾರಗಳಲ್ಲಿ ನಲವತ್ತಕ್ಕೂ ಅಧಿಕ ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ತಮ್ಮ ಕೃತಿಗಳ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ಹೊಸ ಕಸುವು ತುಂಬಿದ್ದಾರೆ. ಸಾಹಿತ್ಯ, ಸಂಶೋಧನೆ ಹಾಗೂ ಜಾನಪದ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಪರಿಗಣಿಸಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಡಿ.18ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯುವ ‘ಕುವೆಂಪು ದರ್ಶನ ಮತ್ತು ಪ್ರಸ್ತುತತೆ’ ವಿಚಾರಸಂಕಿರಣದ ಸಮಾರೋಪದಲ್ಲಿ ಪ್ರದಾನ ಮಾಡಲಾಗುವುದು ಎಂದು ಎಂದು ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ ತಿಳಿಸಿದ್ದಾರೆ.
ಅವರನ್ನು ಸಾಹಿತಿ ಟಿ.ಸತೀಶ್ ಜವರೇಗೌಡ ಅಭಿನಂದಿಸಿದ್ದಾರೆ.