ಮನೆ ರಾಜ್ಯ ಕಾಡಾನೆ ದಾಳಿ: ಕಾರ್ಮಿಕನಿಗೆ ಗಂಭೀರ ಗಾಯ

ಕಾಡಾನೆ ದಾಳಿ: ಕಾರ್ಮಿಕನಿಗೆ ಗಂಭೀರ ಗಾಯ

0
ಸಾಂದರ್ಭಿಕ ಚಿತ್ರ

ಕೊಡಗು: ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಗ್ರಾಮದ ಮಸ್ಕಲ್ ಕಾಫಿತೋಟದಲ್ಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿನಡೆದಿದ್ದು, ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ.

Join Our Whatsapp Group

ಬಾಬಿ(40) ಗಾಯಗೊಂಡ ಕಾರ್ಮಿಕ.

ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಅಮ್ಮತ್ತಿ ಆಸ್ಪತ್ರೆಯಲ್ಲಿ ಗಾಯಾಳು ಬಾಬಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನೆ ಮಾಡಲಾಗಿದೆ.

ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಕೂಡ ಮುಂದುವರೆದಿದ್ದು, ಸಕಲೇಶಪುರ ತಾಲ್ಲೂಕಿನ ಗುಳಗಳಲೆ ಹಾಗೂ ಹೆಬ್ಬನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಕಾಡಾನೆ ದಾಳಿಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದರು.

ಹಿಂದಿನ ಲೇಖನಬೆಂಗಳೂರಿನ ಬಸವನಗುಡಿಯಲ್ಲಿ ಗೋವರ್ಧನಗಿರಿಧಾರಿ
ಮುಂದಿನ ಲೇಖನಮುಖ್ಯಮಂತ್ರಿ ಆಯ್ಕೆ ಕಗ್ಗಂಟು: ಮಲ್ಲಿಕಾರ್ಜುನ ಖರ್ಗೆ- ರಾಹುಲ್ ಗಾಂಧಿ ಮಹತ್ವದ ಚರ್ಚೆ