ಮನೆ ಅಪರಾಧ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ಮೇಲೆ ಕಾಡಾನೆ ದಾಳಿ: ಮಹಿಳೆ ಸಾವು

ಮಹದೇಶ್ವರ ಬೆಟ್ಟದಲ್ಲಿ ಭಕ್ತರ ಮೇಲೆ ಕಾಡಾನೆ ದಾಳಿ: ಮಹಿಳೆ ಸಾವು

0

ಮಹದೇಶ್ವರ ಬೆಟ್ಟ (ಚಾಮರಾಜನಗರ): ಹನೂರು ತಾಲ್ಲೂಕಿನ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಮಂಗಳವಾರ ಸಂಜೆ ಕಾಲ್ನಡಿಗೆಯಲ್ಲಿ ಬರುತ್ತಿದ್ದ ಭಕ್ತರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

Join Our Whatsapp Group

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಿರುಗಾವಲಿನ ಹೊನ್ನೇನಳ್ಳಿಯ ಲಕ್ಷ್ಮಿ (40) ಮೃತಪಟ್ಟವರು.

ಗ್ರಾಮದಿಂದ ಎಂಟು ಮಂದಿ ಬೆಟ್ಟಕ್ಕೆ ಬಂದಿದ್ದರು. ಈ ಪೈಕಿ ಲಕ್ಷ್ಮಿ, ಪದ್ಮಮ್ಮ, ಪುಟ್ಟರಾಜು ಅವರು ಕಾಲ್ನಡಿಗೆಯಲ್ಲಿ ಬರುತ್ತಿದ್ದರು. ಸಂಜೆ 7 ಗಂಟೆಯ ಸುಮಾರಿಗೆ ಆನೆ ತಲೆದಿಂಬ ಸಮೀಪ ಕಾಡಾನೆ ಹಠಾತ್ ದಾಳಿ ಮಾಡಿದೆ. ಆನೆ ತುಳಿತಕ್ಕೆ ಒಳಗಾದ ಲಕ್ಷ್ಮಿ ಅವರು ಸ್ಥಳದಲ್ಲೇ ಮೃತಪಟ್ಟರು.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಿಂದಿನ ಲೇಖನಕ್ರಿಪ್ಟೊ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂದು ನಂಬಿಸಿ ಎಂಬಿಎ ವಿದ್ಯಾರ್ಥಿಗೆ  23 ಲಕ್ಷ ವಂಚನೆ
ಮುಂದಿನ ಲೇಖನಬೆಂಗಳೂರು: ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ತಾಯಿ