ಮನೆ Uncategorized ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣ : ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್‌ಗೆ...

ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣ : ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್‌ಗೆ ನ್ಯಾಯಾಂಗ ಬಂಧನ

0

ಬೆಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಗ್ ಬಾಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ಕಿಶನ್‌ಗೆ ಏಪ್ರಿಲ್ 29ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ.

ಪೊಲೀಸರು ಈತನ ವಿರುದ್ಧ ಸಾರ್ವಜನಿಕ ಸ್ಥಳದಲ್ಲಿ ಅಪಾಯಕಾರಿ ಶಸ್ತ್ರಾಸ್ತ್ರದ ಪ್ರದರ್ಶನ ಮಾಡಿದ ಆರೋಪದಡಿ ಪ್ರಕರಣ ದಾಖಲಿಸಿದ್ದರು. ಈ ಮೊದಲು ನ್ಯಾಯಾಲಯ ರಜತ್ ಹಾಗೂ ಇನ್ನೊಬ್ಬ ಆರೋಪಿಯಾದ ವಿನಯ್ ಗೌಡಗೆ ಜಾಮೀನು ನೀಡಿದರೂ, ಕೋರ್ಟ್ ಆದೇಶವನ್ನು ಲಂಗನಿಸಿದ ಕಾರಣ ರಜತ್ ವಿರುದ್ಧ ಮತ್ತೆ ಕ್ರಮ ಕೈಗೊಳ್ಳಲಾಯಿತು.

ಇಂದು ನ್ಯಾಯಾಲಯಕ್ಕೆ ಹಾಜರಾದ ರಜತ್ ಕಿಶನ್, ವಿಚಾರಣೆಯ ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಇನ್ನು, ವಿನಯ್ ಗೌಡಗೆ 500 ರೂ. ದಂಡ ವಿಧಿಸಿ, ವಾರಂಟ್ ರೀಕಾಲ್ ಮಾಡಲಾಗಿದೆ.

ರಜತ್ ಪರವಾಗಿ ಈಗಾಗಲೇ ಜಾಮೀನು ಅರ್ಜಿ ಸಲ್ಲಿಸಲಾಗಿದ್ದು, ಇದರ ವಿಚಾರಣೆ ನಾಳೆ ನಡೆಯಲಿದೆ. ಸಾಮಾಜಿಕ ಜಾಲತಾಣಗಳ ಪ್ರಭಾವ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ಇಂತಹ ಪ್ರಕರಣಗಳು ಶಿಸ್ತು ಮತ್ತು ಜವಾಬ್ದಾರಿಯ ಮನೋಭಾವವಿಲ್ಲದ ಕಂಟೆಂಟ್ ನಿರ್ಮಾಣದ ವಿರುದ್ಧ ಕಾನೂನು ಕ್ರಮ ಜರುಗುತ್ತಿರುವುದನ್ನು ತೋರಿಸುತ್ತವೆ.