ಮನೆ Uncategorized ಮಾಜಿ ಮುಖ್ಯಮಂತ್ರಿ ಎಸ್​ ಎಂ​ ಕೃಷ್ಣ ಮಣಿಪಾಲ್​ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ ಎಸ್​ ಎಂ​ ಕೃಷ್ಣ ಮಣಿಪಾಲ್​ ಆಸ್ಪತ್ರೆಗೆ ದಾಖಲು

0

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್​​ಎಮ್​ ಕೃಷ್ಣ(92) ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Join Our Whatsapp Group

ಇಂದು (ಅ.19) ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಎಸ್ ​ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.

ಎಸ್​ಎಮ್​​ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್​ ಕಾರಂತ್​ ನೇತೃತ್ವದಲ್ಲಿ ಮಾಜಿ ವಿದೇಶಾಂಗ ಸಚಿವ ಎಸ್​ಎಂ ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ಹಿರಿಯ ರಾಜಕಾರಣಿ ಎಸ್ಎಮ್​ ಕೃಷ್ಣ ಅವರು​ ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.