ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೊಣಕಾಲು ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಬೊಮ್ಮಾಯಿ ಅವರ ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬಿಜೆಪಿಯ ನಾಯಕ ಬಿ.ಎಸ್.ಯಡಿಯೂರಪ್ಪ ಈ ಕುರಿತು ಬರೆದುಕೊಂಡಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.