ಮನೆ ರಾಜಕೀಯ ಕೇರಳದ ಶ್ರೀ ರಾಜರಾಜೇಶ್ವರ ದೇಗುಲಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ

ಕೇರಳದ ಶ್ರೀ ರಾಜರಾಜೇಶ್ವರ ದೇಗುಲಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ

0

ಕಣ್ಣೂರು (ಕೇರಳ): ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಅದ ಹೆಚ್.ಡಿ.ಕುಮಾರಸ್ವಾಮಿ ಅವರು ಇಲ್ಲಿಗೆ ಸಮೀಪದ ತಳಿಪರಂಬದ ಪುರಾಣ ಪ್ರಸಿದ್ಧ ಶ್ರೀ ರಾಜರಾಜೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಖಾಸಗಿ ಕಾರ್ಯಕ್ರಮದ ನಿಮಿತ್ತ ಕಣ್ಣೂರಿಗೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿಗಳು, ಬೆಳಗ್ಗೆಯೇ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ ಕೆಲ ಹೊತ್ತು ದೈವ ಸನ್ನಿಧಾನದಲ್ಲಿ ಸಮಯ ಕಳೆದರು.

ಪ್ರಶಾಂತ ವಾತಾವರಣದಲ್ಲಿ ಇರುವ ಈ ಆಲಯ, ನಮ್ಮ ದೇಶದ 108 ಪ್ರಾಚೀನ ಶಿವಾಲಯಗಳಲ್ಲಿ ಒಂದು. ತ್ರೇತಾಯುಗದಲ್ಲಿ ಸಾಕ್ಷಾತ್ ಶ್ರೀರಾಮನೇ ಇಲ್ಲಿನ ಶ್ರೀ ರಾಜರಾಜೇಶ್ವರ ಸ್ವಾಮಿ ಅವರಿಗೆ ಪೂಜೆ ಸಲ್ಲಿಸಿದ್ದರು  ಎಂಬ ಐತಿಹ್ಯವಿದೆ. ಇಂಥ ಪುಣ್ಯಸ್ಥಳದಲ್ಲಿ ಶಿವನ ದರುಶನ ಪಡೆದಿದ್ದು ನನ್ನ ಭಾಗ್ಯವೇ ಸರಿ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರು ಹಾಗೂ ಮಾಜಿ ಸಚಿವರಾದ ಬಂಡೆಪ್ಪ ಖಾಷೆಂಪೂರ್  ಅವರು ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿ ಇದ್ದರು.

ದೇವಳದ ಆಡಳಿತ ಮಂಡಳಿಯ ಮುಖ್ಯಸ್ಥರು, ಇತರೆ ಸದಸ್ಯರು, ಅಧಿಕಾರಿಗಳು ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡು ದೇವಳದ ಬಗ್ಗೆ ಮಾಹಿತಿ ನೀಡಿದರು.

ದೇವರ ದರುಶನದ ನಂತರ ಮಾಜಿ ಮುಖ್ಯಮಂತ್ರಿಗಳು ಸುವಿಶಾಲವಾದ ದೇವಳಕ್ಕೆ ಪ್ರದಕ್ಷಿಣೆ ಹಾಕಿದರು. ದೇವಾಲಯದ ನಿರ್ಮಾಣ ಶೈಲಿ, ಧಾರ್ಮಿಕ ವಿಧಿ ವಿಧಾನಗಳು ಇತ್ಯಾದಿ ಅಂಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಹಿಂದಿನ ಲೇಖನಬಿರ್ಭೂಮ್ ಪ್ರಕರಣ: 21 ಶಂಕಿತರ ಮೇಲೆ ಎಫ್ ಐಆರ್ ದಾಖಲಿಸಿದ ಸಿಬಿಐ
ಮುಂದಿನ ಲೇಖನಆರ್ ಎಸ್ ಎಸ್ ಸದಸ್ಯರು, ಸಂಘಟನೆ ಕುರಿತ ಲೇಖನಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಬಹುದು: ಕೇರಳ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್