ಮೈಸೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಇಂದು ಬೆಳಿಗ್ಗೆ ರೈಲ್ವೇ ನಿಲ್ದಾಣದ ವೃತ್ತದಲ್ಲಿರುವ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ಅವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಣೆ ಮಾಡಲಾಯಿತು.
ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ ಅವರು ಡಾ. ಬಾಬು ಜಗಜೀವನರಾಂ ಅವರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿ, ನಮಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.