ಮನೆ ಸುದ್ದಿ ಜಾಲ ಮಾಜಿ IPS ಅಧಿಕಾರಿ ಅಣ್ಣಾಮಲೈಯಿಂದ BJP ಪಕ್ಷಕ್ಕೆ ಗುಡ್ ಬೈ

ಮಾಜಿ IPS ಅಧಿಕಾರಿ ಅಣ್ಣಾಮಲೈಯಿಂದ BJP ಪಕ್ಷಕ್ಕೆ ಗುಡ್ ಬೈ

0

ಕರ್ನಾಟಕದ ಅತ್ಯಂತ ಜನಪ್ರಿಯ ಐಪಿಎಸ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಕೆ ಅಣ್ಣಾಮಲೈ ತಮ್ಮ ಐಪಿಎಸ್‌ ಹುದ್ದೆಗೆ ರಾಜೀನಾಮೆ ನೀಡಿ, ತಮಿಳುನಾಡಿನಲ್ಲಿ ಬಿಜೆಪಿ ಪಕ್ಷವನ್ನು ಬೇರು ಮಟ್ಟದಲ್ಲಿ ಕಟ್ಟುವ ಕೆಲಸಕ್ಕೆ ಮುಂದಾಗಿದ್ದರು. ಆದರೆ ತಮಿಳುನಾಡಿನಲ್ಲಿನ ಇತ್ತೀಚೆಗಿನ ಬೆಳವಣಿಗೆಗಳಿಂದ ಮನನೊಂದು ಬಿಜೆಪಿ ಪಕ್ಷಕ್ಕೆ ವಿದಾಯ ಘೋಷಿಸಿದ್ದಾರೆ. ತಮಿಳುನಾಡು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಪ್ರತಿದಿನ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದ ಅಣ್ಣಾಮಲೈ, ಆ ಬಳಿಕ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು ಎನ್ನಲಾಗುತ್ತಿದೆ.

ಇನ್ನು ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಣ್ಣಾಮಲೈಗೆ ಬಿಜೆಪಿಯಿಂದ ಟಿಕೆಟ್ ಕೂಡಾ ಸಿಕ್ಕಿರಲಿಲ್ಲ. ಇನ್ನು ಕೇಂದ್ರ ಹಾಗೂ ರಾಜ್ಯ ಬಿಜೆಪಿಯ ತಾಳಮೇಳದ ಕೊರತೆಯಿಂದಾಗಿ ಅಣ್ಣಮಲೈ ಇದೀಗ ಬಿಜೆಪಿ ಪಕ್ಷಕ್ಕೆ ಗುಡ್‌ ಬೈ ಹೇಳಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟುವತ್ತ ಗಮನ ಹರಿಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಜೋರಾಗಿದೆ. ಹೊಸ ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆಯಲ್ಲಿರುವ ಕೆ ಅಣ್ಣಾಮಲೈ ಅವರ ಒಟ್ಟು ಸಂಪತ್ತು ಎಷ್ಟಿರಬಹುದು ಎನ್ನುವ ಕುತೂಹಲ ನಿಮ್ಮನ್ನೂ ಕಾಡುತ್ತಿರಬಹುದು. 2024ರಲ್ಲಿ ಬಿಜೆಪಿ ಪಕ್ಷದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಾಗ ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ಒಟ್ಟು ಆಸ್ತಿ ಎಷ್ಟು ಎನ್ನುವ ಇಂಟ್ರೆಸ್ಟಿಂಗ್ ಮಾಹಿತಿಯನ್ನು ಹಂಚಿಕೊಂಡಿದ್ದರು. ADR ಅಂದರೆ ಅಸೋಸಿಯೇಷನ್ ಪಾರ್ ಡೆಮೊಕ್ರಾಟಿಕ್ 2024ರ ರಿಪೋರ್ಟ್ ಪ್ರಕಾರ ಅಣ್ಣಾಮಲೈ ಅವರ ಒಟ್ಟು ಸಂಪತ್ತು 4 ಕೋಟಿ, 7 ಲಕ್ಷದ 26 ಸಾವಿರದ 627(4,07,26,627)ರುಪಾಯಿಗಳು. ಇದರದಲ್ಲಿ ಚರಾಸ್ತಿ ₹2,42,26,627 ಆದರೆ, ಸ್ಥಿರ ಆಸ್ತಿ ಒಂದು ಕೋಟಿ 65 ಲಕ್ಷ ರುಪಾಯಿಗಳಾಗಿವೆ ಎಂಬುದ್ದಾಗಿದೆ.

ಹಾಗೂ ಮಾಧ್ಯಮಗಳ ವರದಿಗಳ ಪ್ರಕಾರ, ಅಣ್ಣಾಮಲೈ ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಆದರೆ ಬಿಜೆಪಿ ಇನ್ನೂ ಅಣ್ಣಾಮಲೈ ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿಲ್ಲ ಎಂದು ತಿಳಿದುಬಂದಿದೆ.