ಮಂಡ್ಯ:ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ನಾಯಕರ ಬಗ್ಗೆ ಟೀಕೆ ಮಾಡಿದ್ದಾರೆನ್ನುವ ಆರೋಪದ ಹಿನ್ನೆಲೆಯಲ್ಲಿ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಡಾ.ಎಚ್.ಎನ್.ರವೀಂದ್ರ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಮುಖಂಡ ರವೀಂದ್ರ ಅವರು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಟೀಕೆ ಮಾಡಿದ್ದಾರೆ.ಮಾತ್ರವಲ್ಲದೆ ರಾಹುಲ್‌ಗಾಂಧಿ ಹಾಗೂ ಗ್ಯಾರಂಟಿ ಯೋಜನೆ ವಿರುದ್ಧವೂ ಮಾತನಾಡಿದ್ದಾರೆ.ಈ ಸಂಬಂಧ ಪಕ್ಷದ ನಿಯಮಾವಳಿ ಪ್ರಕಾರ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ ಆದೇಶದಲ್ಲಿ ತಿಳಿಸಿದ್ದಾರೆ.














