ಮನೆ ಅಪರಾಧ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಬಾವ ಅಪಹರಣ

ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಬಾವ ಅಪಹರಣ

0

ರಾಮನಗರ: ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರ ಬಾವನನ್ನು ಅಪಹರಿಸಿದ ಘಟನೆ ನಡೆದಿದೆ.

ಮಹದೇವಯ್ಯ (62) ಅವರು ಕಿಡ್ನಾಪ್ ಆಗಿರೋ ಶಂಕೆ ವ್ಯಕ್ತವಾಗಿದೆ. ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ ತೋಟದಲ್ಲಿ ವಾಸವಾಗಿದ್ದ ಮಹದೇವಯ್ಯ ಅವರು ನಾಪತ್ತೆಯಾಗಿದ್ದಾರೆ.

ಮಹದೇವತಯ್ಯ ಅವರ ಮನೆಯ ಕೋಣೆ, ಬೀರು ಬಾಗಿಲುಗಳು ತೆರೆದ ಸ್ಥಿತಿಯಲ್ಲಿದೆ. ಮಹದೇಶ್ವರ ಬೆಟ್ಟದಲ್ಲಿ ಮಹದೇವಯ್ಯ ಟವರ್ ಲೋಕೇಶನ್ ಪತ್ತೆಯಾಗಿದೆ.

ಮಹಾದೇವಯ್ಯ ಕಾಣೆಯಾಗಿರುವ ಬಗ್ಗೆ ಚನ್ನಪ್ಟಣ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.