ಮನೆ ರಾಜ್ಯ ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ನಿಧನ: ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ನಿಧನ: ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

0

ಚಿಕ್ಕಮಗಳೂರು: ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ನಿಧನ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾರದ ಹಳ್ಳಿ ನಿವಾಸಕ್ಕೆ ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಮೂಡಿಗೆರೆ ತಾಲೂಕು ದಾರದಹಳ್ಳಿ ಗ್ರಾಮದ ಡಿ.ಬಿ. ಚಂದ್ರೇಗೌಡರ ನಿವಾಸದ ಮುಂಭಾಗ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಬುಧವಾರ ಮಧ್ಯಾಹ್ನ 1ಗಂಟೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾರ್ಥಿವ ಶರೀರಕ್ಕೆ ಹೂಗು ಚ್ಚವಿಟ್ಟು ನಮಿಸಿದರು. ಇದೇ ವೇಳೆ ಪೋಲಿಸ್ ಸಿಬ್ಬಂದಿಗಳು ಸಕಲ ಸರ್ಕಾರಿ ಗೌರವವನ್ನು ಸಲ್ಲಿಸಿದರು.

ನಂತರ ಸುದ್ದಿಗಾರರ ಜೋತೆ ಮಾತನಾಡಿ ನಾಲ್ಕು ಸದನ ಗಳನ್ನು ಪ್ರವೇಶಿಸಿ ಉತ್ತಮವಾಗಿ ಕಾರ್ಯ ನಿರ್ವಹಿ ಸಿದ್ದರು. ಇಂದಿರಾಗಾಂಧಿ ಯವರಿಗೆ ಕ್ಷೇತ್ರವನ್ನು ಬಿಟ್ಟುಕೊಡುವ ಮೂಲಕ ಇಂದಿರಾಗಾಂಧಿ ಯವರಿಗೆ ಪುನರ್ಜನ್ಮ ನೀಡಿದ್ದರು ಎಂದದರು.