ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ನಾಗೇಂದ್ರ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ ಬೆಳಿಗ್ಗೆ ಬಿಡುಗಡೆ ಆದರು.
ಅಕ್ರಮ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದರು. ನಾಗೇಂದ್ರ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.