ಮನೆ ರಾಜ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ್ ​ರೈ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ್ ​ರೈ

0

ಮಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ನಾಯಕ ರಮಾನಾಥ್ ​ರೈ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

Join Our Whatsapp Group

ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮಾನಾಥ್ ​ರೈ, ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ಸೋತರೂ ಪಕ್ಷದ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ‌ ಇರುತ್ತೇನೆ. ನನ್ನ ಸೋಲಿನ ಅವಲೋಕನ ಮಾಡಿದ್ದೇನೆ. ಮುಂದೆ ಹೈಕಮಾಂಡ್​​ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟು ರಾಜ್ಯದ ಜನ ಮತ ಕೊಟ್ಟಿದ್ದಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಮಗೆ ಸಣ್ಣ ಹಿನ್ನಡೆ ಆಗಿದೆ. ಬಿಜೆಪಿ ಸ್ಪಷ್ಟ ಬಹುಮತದಿಂದ ಯಾವತ್ತೂ ಸರ್ಕಾರ ರಚಿಸಲಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸುತ್ತೆ. ಮುಖ್ಯಮಂತ್ರಿ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದ್ದು, ಸಿಎಂ ಪ್ರಮಾಣ ವಚನದ ಬಳಿಕ ಗ್ಯಾರಂಟಿ ಅನುಷ್ಠಾನ ಆಗಲಿದೆ ಎಂದು ಹೇಳಿದರು.

ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ ರಮಾನಾಥ್ ರೈ ಅವರು ಈ ಬಾರಿಯೂ ಸಹ ಬಂಟ್ವಾಳ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದಾರೆ. ಇದುವರೆಗೆ ಸತತ ಒಂಬತ್ತನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಅವರು 1985 ರಿಂದ ಇದುವರೆಗೂ ಅವರು ಆರು ಬಾರಿ ಗೆದ್ದಿದ್ದಾರೆ ಮತ್ತು ಈ ಸಲ ಸೇರಿಸಿ ಮೂರು ಬಾರಿ ಸೋತಿದ್ದಾರೆ.