ಬೆಂಗಳೂರು: ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಅವರು ಶನಿವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎ.ಟಿ ರಾಮಸ್ವಾಮಿ ಅವರನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ಎ.ಟಿ.ರಾಮಸ್ವಾಮಿ ಅವರು ಶಾಸಕ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದರು. ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದರು.














