ಮನೆ ರಾಜ್ಯ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

0

ಚಿತ್ರದುರ್ಗ: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಶಾಸಕರಾದ ಶಿವಾನಂದ ಅಂಬಡಗಟ್ಟಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ.

ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದರೂ ನಂತರ ಎಸ್.ಎಂ. ಕೃಷ್ಣ ಅವರ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದರು. ಧಾರವಾಡ ಜಿಲ್ಲೆಯ ಪಕ್ಷ ಸಂಘಟನೆಯಲ್ಲಿ ಸಾಕಷ್ಟು ಶ್ರಮ ವಹಿಸಿದ್ದರು.

ಕಾಂಗ್ರೆಸ್ ಪಕ್ಷ ಜಿಲ್ಲೆಯ ಹಿರಿಯ ನಾಯಕನನ್ನು ಕಳೆದುಕೊಂಡಿದೆ. ಇವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಕೊಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನಕೆ.ಆರ್.ಪೇಟೆ: ತೋಟದ ಮನೆಯೊಳಗೆ ನುಗ್ಗಿದ ಚಿರತೆಯನ್ನು ಕೂಡಿ ಹಾಕಿದ ಗ್ರಾಮಸ್ಥರು
ಮುಂದಿನ ಲೇಖನನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ: ಎಚ್‌.ಡಿ. ಕುಮಾರಸ್ವಾಮಿ