ಮನೆ ರಾಜ್ಯ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ

ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ

0

ಧಾರವಾಡ: ಸರಳ ಸಜ್ಜನ ರಾಜಕಾರಣಿ, ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರು ಪತ್ನಿ, ಓರ್ವ ಪುತ್ರ ಹಾಗು ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಅಳ್ನಾವರದಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ನಡಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಘಟಕದ ಉಪಾಧ್ಯಕ್ಷರು ಆಗಿದ್ದ ಅವರು, 1999 ರಿಂದ 2004 ರ ಅವಧಿಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಅವರ ಸಹೋದರ ಶಶಿಧರ್ ಅಂಬಡಗಟ್ಟಿ ಅವರ ನಿಧನ ನಂತರ ನಡೆದ ಉಪ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.

ನಂತರ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು ಮತ್ತೆ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಇದೀಗ ಮತ್ತೆ ಮಾಜಿ ಸಚಿವ ವಿನಯ್ ಕುಲಕರ್ಣಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದರು.

ಹಿಂದಿನ ಲೇಖನಚಾಮುಂಡಿ ಬೆಟ್ಟ ಸೇರಿದಂತೆ 15 ಕಡೆ ರೋಪ್ ವೇ ಯೋಜನೆ
ಮುಂದಿನ ಲೇಖನದೆಹಲಿ ಅಬಕಾರಿ ನೀತಿ ಹಗರಣ: ಜಾಹೀರಾತುದಾರನ ಬಂಧನ