ಮನೆ ಕಾನೂನು ತನ್ನದೇ ವೀಡಿಯೋ ಕೋರ್ಟ್‌ ನಲ್ಲಿ ವೀಕ್ಷಿಸಲು ಮಾಜಿ ಸಂಸದ ಪ್ರಜ್ವಲ್‌ ಗೆ ಅನುಮತಿ

ತನ್ನದೇ ವೀಡಿಯೋ ಕೋರ್ಟ್‌ ನಲ್ಲಿ ವೀಕ್ಷಿಸಲು ಮಾಜಿ ಸಂಸದ ಪ್ರಜ್ವಲ್‌ ಗೆ ಅನುಮತಿ

0

ಬೆಂಗಳೂರು: ಹಾಸನದ ಅಶ್ಲೀಲ ವೀಡಿಯೋ ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ಖುದ್ದು ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ.

Join Our Whatsapp Group

ಮಾಜಿ ಸಂಸದ ಪ್ರಜ್ವಲ್‌ ಅವರು ಪ್ರಕರಣದಿಂದ ತಮ್ಮನ್ನು ಖುಲಾಸೆ ಮಾಡುವಂತೆ ಸಲ್ಲಿಸಿದ್ದ ಅರ್ಜಿ ಹಾಗೂ ಅತ್ಯಾಚಾರಕ್ಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಪ್ರಮುಖ ಸಾಕ್ಷಿಯಾಗಿರುವ ಅಶ್ಲೀಲ ವೀಡಿಯೋ ಹಾಗೂ ಫೋಟೋಗಳನ್ನು ನೀಡುವಂತೆ ಸಲ್ಲಿಸಿದ್ದ ಅರ್ಜಿ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿತು.

ನಿಮಗೆ ವೀಡಿಯೋ ಹಾಗೂ ಫೋಟೋ ನೀಡಲು ಸಾಧ್ಯವಿಲ್ಲ. ಹೈಕೋರ್ಟ್‌ ನಲ್ಲಿಯೂ ಪ್ರಕರಣದ ವಿಚಾರಣೆ ನಡೆಯುತ್ತಿದೆ. ನಿಮ್ಮ ವೀಡಿಯೋ ಹಾಗೂ ಫೋಟೋಗಳನ್ನು ನ್ಯಾಯಾಲಯದಲ್ಲೇ ವೀಕ್ಷಣೆ ಮಾಡುವುದಕ್ಕೆ ಅವಕಾಶ ನೀಡಲಾಗಿದೆ ಎಂದು ಕೋರ್ಟ್‌ ಹೇಳಿತು. ಪ್ರಜ್ವಲ್‌ ಕೋರಿಕೆ ಮೇರೆಗೆ ವೀಡಿಯೋ ಹಾಗೂ ಫೋಟೋ ತೋರಿಸಲು ಸೂಚನೆ ನೀಡಿದರು.

ಪ್ರಜ್ವಲ್‌ ರೇವಣ್ಣ ಹಾಗೂ ಅವರ ಪರ ವಕೀಲರಿಗೆ ಸಾಕ್ಷಿ ವೀಕ್ಷಣೆಗೆ ಅವಕಾಶ ನೀಡಲಾಯಿತು. ಆದರೆ ಪ್ರಜ್ವಲ್‌ ಪರ ವಕೀಲರು ವಿಚಾರಣೆ ಸೋಮವಾರಕ್ಕೆ ಮುಂದೂಡುವಂತೆ ಮನವಿ ಮಾಡಿದರು. ಇದನ್ನು ಕೋರ್ಟ್‌ ತಿರಸ್ಕರಿಸಿದಾಗ ಶನಿವಾರವಾದರೂ (ಇಂದು)ವೀಕ್ಷಣೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಸಮ್ಮತಿಸಿದ ನ್ಯಾಯಾಲಯವು ತಾಂತ್ರಿಕ ಪರಿಣಿತರ ಸಹಾಯದಿಂದ ಶನಿವಾರ ಫೋಟೋ, ವೀಡಿಯೋ ವೀಕ್ಷಿಸಲು ಅವಕಾಶ ನೀಡಿತು.

ಪ್ರಜ್ವಲ್‌ ತಮ್ಮ ವಿರುದ್ಧದ ಅತ್ಯಾಚಾರ ಪ್ರಕರಣದ ಆರೋಪವನ್ನು ಖುಲಾಸೆ ಮಾಡುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಈ ಪ್ರಕರಣದ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದ್ದು ಸರ್ಕಾರಿ ಅಭಿಯೋಜಕರು ವಾದ ಮಂಡಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಪ್ರಜ್ವಲ್‌ ಮತ್ತೆ ಪರಪ್ಪನ ಅಗ್ರಹಾರಕ್ಕೆ

ನ್ಯಾಯಾಲಯದಲ್ಲಿ ವಿಚಾರಣೆ ಮುಗಿದ ಬಳಿಕ ಪೊಲೀಸರು ಪ್ರಜ್ವಲ್‌ ರೇವಣ್ಣ ಅವರನ್ನು ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಿಟ್ಟಿದ್ದಾರೆ. ಜಾಮೀನು ಸಿಗದ ಹಿನ್ನೆಲೆಯಲ್ಲಿ ಪ್ರಜ್ವಲ್‌ ರೇವಣ್ಣ ಕೆಲವು ತಿಂಗಳುಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.