ಮನೆ ರಾಜಕೀಯ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮರು ಆಯ್ಕೆ

ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮರು ಆಯ್ಕೆ

0

ಬೆಂಗಳೂರು(Bengaluru): ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರೂ ಆಗಿರುವ ಹೆಚ್.ಡಿ.ದೇವೇಗೌಡರು ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾಧಿಕಾರಿಯಾಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಈ ಘೋಷಣೆ ಮಾಡಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ. ದೇವೇಗೌಡರು ಆಯ್ಕೆಯಾಗಿದ್ದಾರೆ. ಒಂದೇ ನಾಮಪತ್ರ ಬಂದಿರುವುದರಿಂದ ಅವರನ್ನು ಅವಿರೋಧ ಆಯ್ಕೆ ಮಾಡಲಾಗಿದೆ. ನಿನ್ನೆ ರಾತ್ರಿ ಅಧಿಕೃತವಾಗಿ ಆಯ್ಕೆ ಪ್ರಕ್ರಿಯೆ ಮುಗಿಸಲಾಗಿದೆ. ಎರಡು ವರ್ಷಗಳ ಅವಧಿಗೆ ದೇವೆಗೌಡರು ರಾಷ್ಟ್ರೀಯ ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಕೇರಳ ಜೆಡಿಎಸ್ ರಾಜ್ಯಾಧ್ಯಕ್ಷ ಮ್ಯಾಥ್ಯೂ ಥಾಮಸ್ ಮಾತನಾಡಿ, ಮೂರು ವಿಚಾರಗಳ ಮೇಲೆ ಕಾರ್ಯಕಾರಿಣಿಯಲ್ಲಿ ನಿರ್ಣಯ ಮಾಡಲಾಗಿದೆ. ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚೆಯಾಗಿದೆ. ಜನರ ಭಾವನೆಗೆ ಪೂರಕವಾಗಿ ಕೇಂದ್ರ ನೀತಿ ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿದೆ. ಕೇಂದ್ರದ ಆರ್ಥಿಕ ನೀತಿಗಳು ರೈತರು, ಬಡವರಿಗೆ ಮಾರಕವಾಗಿದೆ. ಈ ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚೆಯಾಗಿದೆ. ಇಂದಿನ ಕಾರ್ಯಕಾರಿಣಿಯಲ್ಲಿ ಕೇಂದ್ರದ ನೀತಿಗಳ ಬಗ್ಗೆ ಚರ್ಚೆಯಾಗಲಿದೆ ಎಂದು ತಿಳಿಸಿದರು.